ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಮೀಪದ ಖಾಲಿ ಜಾಗದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಅಪರಾಧ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಒಂದು ಕಾರು ಸುಟ್ಟು ಭಸ್ಮವಾಗಿದೆ.
ಠಾಣೆ ಸಮೀಪದ ವಿದ್ಯುತ್ ಪರಿವರ್ತಕ ಕೂಡ ಇತ್ತು. ಎಚ್ಚೆತ್ತ ಅಧಿಕಾರಿಗಳು ಕೂಡಲೇ ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಷ್ಟರಲ್ಲಿ ಬೆಂಕಿಯ ಕೆನ್ನಾಲಿಗೆಗೆ ಅಪರಾಧ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಒಂದು ಕಾರು ಸುಟ್ಟು ಭಸ್ಮವಾಗಿದೆ.
ಅಕ್ಕ ಪಕ್ಕದಲ್ಲಿದ್ದ ಗಿಡ ಮರಗಳಿಗೂ ಬೆಂಕಿ ಹೊತ್ತಿಕೊಂಡ ಉರಿದಿದೆ. ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ನಿಯಂತ್ರಿಸಿದ್ದಾರೆ.