ದೊಡ್ಡಬಳ್ಳಾಪುರ: ನಾಳೆ (ಜೂ.19) ತಾಲ್ಲೂಕು ಜನಸ್ಪಂದನಾ ಕಾರ್ಯಕ್ರಮ

ಜೂನ್ 19(ಬುಧವಾರ) ರಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಂಟಿಯಾಗಿ ಜಿಲ್ಲಾ & ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ದೊಡ್ಡಬಳ್ಳಾಪುರ ತಾಲ್ಲೂಕಿನ, ಮಧುರೆ ಹೋಬಳಿಯ ಕನಸವಾಡಿ ಗ್ರಾಮದ “ಡಾ. ಬಿ ಆರ್ ಅಂಬೇಡ್ಕರ್ ಭವನ” ದಲ್ಲಿ ಬೆಳಗ್ಗೆ 10-00 ಗಂಟೆಗೆ ” ಜನಸ್ಪಂದನಾ ” ಕಾರ್ಯಕ್ರಮ ನಿಗದಿಪಡಿಸಲಾಗಿರುತ್ತದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಎಲ್ಲಾ ಅಧಿಕಾರಿಗಳು ಉಪಸ್ಥಿತರಿರುತ್ತಾರೆ.

ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತಮ್ಮ ಕುಂದುಕೊರತೆ, ಅಹವಾಲುಗಳನ್ನು ಸಲ್ಲಿಸಿ ಪರಿಹಾರ ಪಡೆಯುವುದರ ಮುಖಾಂತರ ” ಜನಸ್ಪಂದನಾ ” ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

21 minutes ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

4 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

6 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

6 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

8 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

12 hours ago