
ದೊಡ್ಡಬಳ್ಳಾಪುರದ ನೂತನ ತಹಶೀಲ್ದಾರ್ ಆಗಿ ಮಲ್ಲಪ್ಪ ನೇಮಕಗೊಂಡಿದ್ದಾರೆ. ಈ ಹಿನ್ನೆಲೆ ಇಂದು ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.
ಈ ವೇಳೆ ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಸದಸ್ಯ ರಾಮಣ್ಣ, ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಅಭಿವೃದ್ಧಿ ಪ್ರಧಿಕಾರದ ಸದಸ್ಯ ಆರ್.ವಿ ಮಹೇಶ್, ದೊಡ್ಡಬಳ್ಳಾಪುರ ಕೃಷಿ ಸಮಾಜದ ಆಧ್ಯಕ್ಷ ಆರ್.ಮುರುಳಿಧರ್, ಸೇರಿದಂತೆ ಇತರರು ಉಪಸ್ಥಿತರಿದ್ದರು…
ದೊಡ್ಡಬಳ್ಳಾಪುರ ತಾಲೂಕಿನ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಕುರಿತಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆಯ ಮುಕ್ತಾರ್ ಪಾಷಾ ಹೆಚ್.ಜಿ. ಆದೇಶಿಸಿದ್ದಾರೆ.
ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ರಾಯಚೂರು ಮಹಾನಗರ ಪಾಲಿಕೆ ಕಂದಾಯ ಅಧಿಕಾರಿಯಾಗಿದ್ದ ಮಲ್ಲಪ್ಪ ಅವರನ್ನು ನೇಮಿಸಲಾಗಿದೆ.
ಸದ್ಯ ಆದೇಶ ಪತ್ರದಲ್ಲಿ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಅವರಿಗೆ ಯಾವುದೇ ಸ್ಥಾನ ಸೂಚಿಸಿಲ್ಲ.