ದೊಡ್ಡಬಳ್ಳಾಪುರ, ನೆಲಮಂಗಲ ಕ್ಷೇತ್ರಗಳ ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ ಸಾಮಾನ್ಯ ವೀಕ್ಷಕರಿಗೆ ಅಹವಾಲು ಸಲ್ಲಿಸಲು ಅವಕಾಶ

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಚುನಾವಣೆ ಸಂಬಂಧ ದೂರುಗಳಿದ್ದಲ್ಲಿ ಸಾರ್ವಜನಿಕರು ಸಾಮಾನ್ಯ ವೀಕ್ಷಕರಾದ ಶಿಲ್ಪ ಗುಪ್ತ ಅವರನ್ನು ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರ(ಐಬಿ)ಗಳಲ್ಲಿ ಎಪ್ರಿಲ್ 26 ರಿಂದ ಮೇ 07 ರವರೆಗೆ ನಿಗದಿತ ಸಮಯದಂದು ಭೇಟಿ ಮಾಡಿ ಅಥವಾ ಸಾಮಾನ್ಯ ವೀಕ್ಷಕರ ಮೊ.ಸಂ.: 8618630558 ಅನ್ನು ಸಂಪರ್ಕಿಸಿ ಅಹವಾಲು ಸಲ್ಲಿಸಬಹುದಾಗಿದೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದ ನೆಲಮಂಗಲ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 26, 28, 30 ಹಾಗೂ ಮೇ 2, 4, 6 ರಂದು ಬೆಳಗ್ಗೆ 11.00 ರಿಂದ 12.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ಪ್ರವಾಸಿ ಮಂದಿರದಲ್ಲಿ ಏಪ್ರಿಲ್ 27, 29 ಹಾಗೂ ಮೇ 01, 03, 05, 07 ರಂದು ಬೆಳಗ್ಗೆ 11.00 ರಿಂದ 12.00 ಗಂಟೆಯವರೆಗೆ ಭೇಟಿ ಮಾಡಬಹುದಾಗಿದೆ.

ಸಾರ್ವಜನಿಕರು ಚುನಾವಣಾ ಸಂಬಂಧ ದೂರುಗಳಿದ್ದಲ್ಲಿ, ನಿಗದಿತ ಸ್ಥಳ, ದಿನಾಂಕ, ಸಮಯದಂದು 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಹಾಗೂ 181-ನೆಲಮಂಗಲ ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಶಿಲ್ಪ ಗುಪ್ತ(ಮೊ.ಸಂ.: 8618630558) ಅವರನ್ನು ಸಂಪರ್ಕಿಸಿ ಅಹವಾಲುಗಳನ್ನು ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

9 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

11 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

13 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

18 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

21 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago