ದೊಡ್ಡಬಳ್ಳಾಪುರ ಪ್ರತಿಭೆಗೆ ಒಲಿದ ಸೌತ್ ಇಂಡಿಯಾ ಬೆಸ್ಟ್ ಕ್ರೈಂ ರಿಪೋರ್ಟರ್ 2025 ಅವಾರ್ಡ್

ಬೆಂಗಳೂರು: ಖಾಸಗಿ ನ್ಯೂಸ್ ಚಾನೆಲ್ ನಲ್ಲಿ ಕ್ರೈಂ ರಿಪೋರ್ಟರ್ ಆಗಿ ಕೆಲಸ ಮಾಡುತ್ತಿರುವ ದೊಡ್ಡಬಳ್ಳಾಪುರ ತಾಲೂಕಿನ ಪ್ರತಿಭೆ ಶಿವಕುಮಾರ್‌ ಅವರಿಗೆ ದಿ ನ್ಯೂ ಇಂಡಿಯನ್ ಟೈಮ್ಸ್‌ನ (TNIT) ಸೌತ್ ಇಂಡಿಯನ್ ಮೀಡಿಯಾ ಅವಾರ್ಡ್ – 2025 ಲಭಿಸಿದೆ.

ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಮಾಧ್ಯಮದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಪ್ರತಿನಿಧಿಗಳಿಗೆ ಪ್ರಶಸ್ತಿ ವಿತರಣೆ ಕಾರ್ಯಕ್ರಮದಲ್ಲಿ ಬೆಸ್ಟ್‌ ಕ್ರೈಂ ರಿಪೋರ್ಟ ಕನ್ನಡ ವಿಭಾಗದಲ್ಲಿ ಶಿವಕುಮಾರ್ ಅವರಿಗೆ ಸೌತ್ ಇಂಡಿಯನ್ ಮೀಡಿಯಾ ಅವಾರ್ಡ್ 2025 ಅನ್ನು ಖ್ಯಾತ ಸಿನಿಮಾ ನಟ ರವಿಕಾಳೆ ಪ್ರದಾನ ಮಾಡಿದ್ದಾರೆ.

ದೊಡ್ಡಬಳ್ಳಾಪುರದ ವಿದ್ಯಾನಗರ ನಿವಾಸಿಯಾದ ಶಿವಕುಮಾ‌ರ್ ಅವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಮೂಹ ಸಂಹವನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಕಳೆದ ಹತ್ತು ವರ್ಷಗಳಿಂದ ಕ್ರೈಂ ರಿಪೋರ್ಟಿಂಗ್ ಮಾಡುತ್ತಿದ್ದಾರೆ.

ಪ್ರಸ್ತುತ ಖಾಸಗಿ ಸುದ್ದಿವಾಹಿನಿ ನ್ಯೂಸ್ ಫಸ್ಟ್ ಕನ್ನಡ ಚಾನಲ್ ನಲ್ಲಿ ಕಳೆದ ಏಳು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅವರು, ಇದಕ್ಕೂ ಮುಂಚೆ ದಿಗ್ವಿಜಯ ನ್ಯೂಸ್ & ರಾಜ್ ನ್ಯೂಸ್ 3 ವರ್ಷ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

6 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

10 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

13 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

16 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago