ದೊಡ್ಡಬಳ್ಳಾಪುರ ಬೈಪಾಸ್ ನಿಂದ ಹೊಸಕೋಟೆ ಯವರೆಗೆ, ಅತ್ತಿಬೆಲೆಯಿಂದ ಹೊಸಕೋಟೆ ಮಾರ್ಗದ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧದ ಕುರಿತು ಅಕ್ಷೇಪಣೆ ಸಲ್ಲಿಕೆಗೆ ಜುಲೈ 31ರವರೆಗೆ ಗಡುವು

ದೊಡ್ಡಬಳ್ಳಾಪುರ ಬೈಪಾಸ್‌ಯಿಂದ ಹೊಸಕೋಟೆ ಸೆಕ್ಷನ್ ರಾಷ್ಟ್ರೀಯ ಹೆದ್ದಾರಿ–648 (ಹಳೇಯ ರಾಷ್ಟ್ರೀಯ ಹೆದ್ದಾರಿ-207)ರ ರಸ್ತೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಅತ್ತಿಬೆಲೆ ಯಿಂದ ಹೊಸಕೋಟೆ (Four laning from km 74.270 to km 58.300) ಮಾರ್ಗವಾಗಿ ಹೋಗುವ ರಸ್ತೆಯಲ್ಲಿ ಭಾರೀ ವಾಹನಗಳು ಅಂದರೆ 3.75 ಮೀಟರ್‌ಗಿಂತ ಎತ್ತರವಾಗಿರುವ ವಾಹನಗಳು ಸದರಿ ಮಾರ್ಗದಲ್ಲಿ ಸಂಚರಿಸುವುದನ್ನು ನಿಷೇಧಿಸಿ, ಹೊಸ ಬೈಪಾಸ್ ರಸ್ತೆ (ರಾ.ಹೆ-648) ರಲ್ಲಿ ಸಂಚರಿಸಲು ಅನುವಾಗುವಂತೆ ಆದೇಶ ಹೊರಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರವರು ಕೋರಿರುವ ಮೇರೆಗೆ, The Karnataka motor vehicles rules 1989,Under rule 221(A)(5) ರಡಿಯಲ್ಲಿ ಆದೇಶ ಹೊರಡಿಸುವ ನಿಟ್ಟಿನಲ್ಲಿ ಈ ಉದ್ದೇಶದಿಂದ ಪ್ರತಿಕೂಲ ಪರಿಣಾಮಕ್ಕೊಳಗಾಗುವ ಸಂಭವವಿರುವ ಇತರೆ ಯಾವುದೇ ಹಿತಾಸಕ್ತಿಯನ್ನು ಹೊಂದಿರುವ ಯಾವುದೇ ಸಾರ್ವಜನಿಕರು ಅಥವಾ ಯಾವುದೇ ವ್ಯಕ್ತಿಯು ಈ ಸಾರ್ವಜನಿಕ ಪ್ರಕಟಣೆ ಹೊರಡಿಸಿದ ದಿನದಿಂದ 15 ದಿನದೊಳಗಾಗಿ ಅಂದರೆ ದಿನಾಂಕ 2023ರ  ಜುಲೈ 31 ರೊಳಗಾಗಿ ಸದರಿ ಉದ್ದೇಶದ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿ ರವರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ರವರಿಗೆ ಲಿಖಿತವಾಗಿ ಅಥವಾ ಈ ಕಛೇರಿಯ ಇ-ಮೇಲ್ ವಿಳಾಸ deo.bangalorer3@gmail.com ಗೆ ಸಲ್ಲಿಸಬಹುದಾಗಿರುತ್ತದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್: ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ ಸ್ಥಾನದಲ್ಲಿದೆ- ಸಿಎಂ ಸಿದ್ದರಾಮಯ್ಯ

ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…

10 hours ago

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

11 hours ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

14 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

19 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

22 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

2 days ago