
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.
ಹುಟ್ಟುಹಬ್ಬ ಹಿನ್ನೆಲೆ ತಾಲ್ಲೂಕಿನ ತಾಯಿ-ಮಕ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 100ಕ್ಕೂ ಹೆಚ್ಚು ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸಿದರು.
ಇದೇ ಸಂದರ್ಭದಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಚುಂಚೇಗೌಡ ಅವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿ, ಅವರ ಆರೋಗ್ಯ, ಆಯುಷ್ಯ ಹಾಗೂ ಸಾರ್ವಜನಿಕ ಸೇವೆಗೆ ಮತ್ತಷ್ಟು ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಆರ್.ವಿ ಮಹೇಶ್, ಆರ್ ವಿ ಮನು, ದೇವರ ಆಶೀರ್ವಾದ ಸದಾ ಚುಂಚೇಗೌಡ ಅವರ ಮೇಲಿರಲಿ. ಅವರಿಗೆ ಉತ್ತಮ ಆರೋಗ್ಯ, ಐಶ್ವರ್ಯ ಹಾಗೂ ಜನಸೇವೆ ಮಾಡುವಂತಹ ಇನ್ನಷ್ಟು ಉನ್ನತ ಹುದ್ದೆ ಮತ್ತು ಅಧಿಕಾರ ದೊರೆಯಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ. ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ MMS ಗ್ರೂಪ್ ನ ಆರ್ ವಿ ಶಿವಕುಮಾರ್, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು, ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು.