
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ರೈಲ್ವೆ ಯಾರ್ಡ್ನ ಡೌನ್ ಲೈನ್ ರೈಲು ಹಳಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರ ಹೆಸರು ಮತ್ತು ವಿಳಾಸದ ಮಾಹಿತಿ ಲಭ್ಯವಾಗಿಲ್ಲ. ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರ ಚಹರೆ: ಸುಮಾರು 170 ಸೆಂ.ಮೀ. ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಕೂದಲಿದೆ. ಎಡಗೈ ಮೇಲೆ ‘ನಂದು’ ಎಂಬ ಹೆಸರಿನ ತೆಲುಗು ಭಾಷೆಯ ಹಚ್ಚೆ ಗುರುತು ಇದೆ.
ಧರಿಸಿದ್ದ ಬಟ್ಟೆಗಳು: ಅರ್ಧ ತೋಳಿನ ಗಾಢ ನೀಲಿ ಮತ್ತು ಕೆಂಪು ಬಣ್ಣದ ಟೀ ಶರ್ಟ್ ಹಾಗೂ ನೀಲಿ ಮತ್ತು ಕೆಂಪು ಬಣ್ಣದ ಶಾರ್ಟ್ಸ್ ಧರಿಸಿದ್ದರು.
ಮೃತರ ಗುರುತು ಪತ್ತೆ ಹಚ್ಚಲು ರೈಲ್ವೆ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಮೃತರ ಬಗ್ಗೆ ಮಾಹಿತಿ ತಿಳಿದವರು ಅಥವಾ ವಾರಸುದಾರರು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರನ್ನು 9108630967, 9902193960 ಹಾಗೂ ರೈಲ್ವೆ ಪೊಲೀಸ್ ಉಪನಿರೀಕ್ಷಕರನ್ನು 9480802118 ಸಂಖ್ಯೆಗಳ ಮೂಲಕ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.