ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಬಳಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲು ನಿಲ್ದಾಣದ ರೈಲ್ವೆ ಯಾರ್ಡ್‌ನಲ್ಲಿ ರೈಲಿಗೆ ಸಿಲುಕಿ ಸುಮಾರು 30 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ರೈಲ್ವೆ ಯಾರ್ಡ್‌ನ ಡೌನ್ ಲೈನ್ ರೈಲು ಹಳಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರ ಹೆಸರು ಮತ್ತು ವಿಳಾಸದ ಮಾಹಿತಿ ಲಭ್ಯವಾಗಿಲ್ಲ. ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರ ಚಹರೆ: ಸುಮಾರು 170 ಸೆಂ.ಮೀ. ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಕೂದಲಿದೆ. ಎಡಗೈ ಮೇಲೆ ‘ನಂದು’ ಎಂಬ ಹೆಸರಿನ ತೆಲುಗು ಭಾಷೆಯ ಹಚ್ಚೆ ಗುರುತು ಇದೆ.

ಧರಿಸಿದ್ದ ಬಟ್ಟೆಗಳು: ಅರ್ಧ ತೋಳಿನ ಗಾಢ ನೀಲಿ ಮತ್ತು ಕೆಂಪು ಬಣ್ಣದ ಟೀ ಶರ್ಟ್ ಹಾಗೂ ನೀಲಿ ಮತ್ತು ಕೆಂಪು ಬಣ್ಣದ ಶಾರ್ಟ್ಸ್ ಧರಿಸಿದ್ದರು.

ಮೃತರ ಗುರುತು ಪತ್ತೆ ಹಚ್ಚಲು ರೈಲ್ವೆ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಮೃತರ ಬಗ್ಗೆ ಮಾಹಿತಿ ತಿಳಿದವರು ಅಥವಾ ವಾರಸುದಾರರು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರನ್ನು 9108630967, 9902193960 ಹಾಗೂ ರೈಲ್ವೆ ಪೊಲೀಸ್ ಉಪನಿರೀಕ್ಷಕರನ್ನು 9480802118 ಸಂಖ್ಯೆಗಳ ಮೂಲಕ ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

Ramesh Babu

Journalist

Recent Posts

ದಸರಾ….

ಮೈಸೂರು ದಸರಾ, ಮಹಿಷಾ ದಸರಾ, ಚಾಮುಂಡಿ ದಸರಾ..... ವಿಜಯ ದಶಮಿ - ಆಯುಧ ಪೂಜೆ..... ದುಷ್ಟ ಶಕ್ತಿಗಳ ವಿರುದ್ಧ ವಿಜಯದ…

2 hours ago

ವೃದ್ಧ ದಂಪತಿಗೆ ‘ವಾತ್ಸಲ್ಯ’ ಮನೆ ಹಸ್ತಾಂತರ

ದೊಡ್ಡಬಳ್ಳಾಪುರ: ತಾಲೂಕಿನ ಮೆಣಸಿ ಗ್ರಾಮದಲ್ಲಿ ವಯೋವೃದ್ಧ ದಂಪತಿ ಕೆಂಪಮ್ಮ ಮತ್ತು ಪಾಪಪಿಲ್ಲಪ್ಪ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

15 hours ago

ದೊಡ್ಡಬಳ್ಳಾಪುರದಲ್ಲಿ ದಾಖಲೆಗಳಿಲ್ಲದೆ ವಾಸ: ಮೂವರು ವಿದೇಶಿ ಪ್ರಜೆಗಳ ವಶ

ದೊಡ್ಡಬಳ್ಳಾಪುರ: ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಅಕ್ರಮವಾಗಿ ಭಾರತದಲ್ಲಿ ನೆಲೆಸಿದ್ದರೆನ್ನಲಾದ ಮೂವರು ನೈಜೀರಿಯಾ…

18 hours ago

ಘಾಟಿ ಸುಬ್ರಹ್ಮಣ್ಯ‌ ದೇವಾಲಯ ಹುಂಡಿ ಎಣಿಕೆ: 77.58 ಲಕ್ಷ ಸಂಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ ಕಾಣಿಕೆ ಎಣಿಕೆ ಕಾರ್ಯ ನಡೆಯಿತು. ಎಣಿಕೆಯಲ್ಲಿ…

21 hours ago

ಲಗೇಜ್ ಟ್ರಾಲಿಯಲ್ಲಿ ಚಿನ್ನ ಸಾಗಾಟ: ಇಬ್ಬರ ಬಂಧನ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…

21 hours ago

ಆಧುನಿಕ ತಂತ್ರಜ್ಞಾನ–ಸಾವಯವ ಕೃಷಿಯಿಂದ ಮಾದರಿಯಾದ ನೆಲಮಂಗಲದ ರೈತ ಮಹಿಳೆ

ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…

22 hours ago