ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್ ನೂತನ ಅಧ್ಯಕ್ಷರಾಗಿ ಸಿ.ಎನ್.ರಾಜಶೇಖರ್ ಆಯ್ಕೆ: ನಗರದಲ್ಲಿ ಗಡಿಯಾರ ಸ್ತಂಭ ನಿರ್ಮಾಣಕ್ಕೆ ನಿರ್ಧಾರ

ಸುವರ್ಣ ಸಂಭ್ರಮ ಪ್ರಯುಕ್ತ ತಾಲೂಕಿನ ಜನತೆಯಲ್ಲಿ ಶಾಶ್ವತವಾಗಿ ಉಳಿಯುವಂತೆ ಟಿಬಿ ವೃತ್ತದ ಬಳಿ ಗಡಿಯಾರ ಸ್ತಂಭ ನಿರ್ಮಾಣ ಮಾಡಲಿದ್ದೇವೆ ಎಂದು ಲಯನ್ಸ್‌ ಕ್ಲಬ್ ನೂತನ ಅಧ್ಯಕ್ಷ ಸಿ.ಎನ್.ರಾಜಶೇಖರ್ ತಿಳಿಸಿದರು.

ನಗರದ ಹೊರವಲಯದ ನವೋದಯ ಶಾಲೆ ಸಮೀಪದ ಖಾಸಗಿ ಹೋಟೆಲ್ ನಲ್ಲಿ ನಡೆದ ದೊಡ್ಡಬಳ್ಳಾಪುರ ಲಯನ್ಸ್ ಕ್ಲಬ್2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗಡಿಯಾರ ಸ್ತಂಭದ ಜೊತೆ ತಾಲೂಕಿನ ಜನತೆಗೆ ಉಪಯುಕ್ತವಾಗುವಂತೆ ಕಣ್ಣಿನ ಆಪರೇಷನ್ ಥಿಯೇಟರ್, ರಕ್ತದಾನ ಬ್ಯಾಂಕ್ ಕಟ್ಟಡವನ್ನೂ ಸಹ ಸ್ಥಾಪನೆ ಮಾಡಲಿದ್ದೇವೆ ಎಂದರು.

50 ವರ್ಷದಿಂದಲೂ ನಡೆದುಕೊಂಡುಬಂದಂತಹ ಉಚಿತ ಕಣ್ಣು ತಪಾಸಣೆ, ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರ, ಆರೋಗ್ಯ ಶಿಬಿರ, ಶೈಕ್ಷಣಿಕ ಶಿಬಿರ, ಪರಿಸರ ಸಂರಕ್ಷಣೆ, ಉಚಿತ ಕಂಪ್ಯೂಟರ್ ಶಿಕ್ಷಣ, ರೈತರ ಸಮಾವೇಶ, ರಾಸುಗಳ ಶಿಬಿರ ಸೇರಿದಂತೆ ಇತರೆ ಸಮಾಜ ಸೇವೆಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದರು.

2023-24ನೇ ಸಾಲಿನಲ್ಲಿ 12 ಕಣ್ಣಿನ ತಪಾಸಣೆ, 12 ಡಯಾಬಿಟಿಸ್ ತಪಾಸಣೆ, 2 ಪಶು ಆರೋಗ್ಯ ತಪಾಸಣೆ, 2 ಆರೋಗ್ಯ ತಪಾಸಣೆ ಶಿಬಿರ, ಮಕ್ಕಳು, ಸಾರ್ವಜನಿಕರಿಗೆ ಆಪ್ತ ಸಮಾಲೋಚನಾ ಶಿಬಿರ, ಕನ್ನಡ ಕಲರವ ಕಾರ್ಯಕ್ರಮ ಸೇರಿದಂತೆ ಇನ್ನಿತರೆ ಸಾಮಾಜಿಕ ಸೇವಾಕಾರ್ಯಗಳನ್ನು ನೆರವೇರಿಸಲಿದ್ದೇವೆ ಎಂದರು.

 ವೇಳೆ ಮಾಜಿ ಅಧ್ಯಕ್ಷ ಎಸ್.ಪ್ರಕಾಶ್, ಕಾರ್ಯದರ್ಶಿ ರಮಾಕಾಂತ್, ಹುಲಿಕಲ್ ನಟರಾಜ್, ಆರ್.ಎಸ್.ಮಂಜುನಾಥ್ ಸೇರಿದಂತೆ 18 ಮಂದಿ ನಿರ್ದೇಶಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

8 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

8 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

14 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

15 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

1 day ago