ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆರ್. ವಿ.ಶಿವಕುಮಾರ್ ಆಯ್ಕೆಯಾಗಿದ್ದಾರೆ.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಆರ್. ವಿ.ಶಿವಕುಮಾರ್ ಅವರಿಗೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸೇರಿದಂತೆ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಹಾಗೂ ವಕೀಲ ಆರ್.ವಿ. ಮಹೇಶ್ ಕುಮಾರ್ ಅಭಿನಂಧಿಸಿದ್ದಾರೆ.
ಈ ವೇಳೆ ಕ್ಷೇತ್ರದ ನೂತನ ಪ್ರಧಾನ ಕಾರ್ಯದರ್ಶಿ ಆರ್. ವಿ.ಶಿವಕುಮಾರ್ ಪಬ್ಲಿಕ್ ಮಿರ್ಚಿಯೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ನನಗೆ ಒಂದು ಒಳ್ಳೆ ಅವಕಾಶ, ಜವಾಬ್ದಾರಿ ನೀಡಿದೆ. ಪಕ್ಷಕ್ಕೆ ನಿಷ್ಠನಾಗಿ, ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ಇನ್ನೂ ಗಟ್ಟಿಗೊಳಿಸಲು ಹಗಲಿರುಳು ಶ್ರಮಿಸುತ್ತೇನೆ ಎಂದು ಹೇಳಿದರು.