ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ವಿಶ್ವ ಅಪಸ್ಮಾರ ದಿನಾಚರಣೆ (ಎಪಿಲೆಪ್ಸಿ ಡೇ) ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಭಿ (KABHI) ತಂಡದ ಸಮ್ಮಿಲಿತ ಆಯೋಜನೆಯೊಂದಿಗೆ ಹಮ್ಮಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ದೋಡ್ಡಬಳ್ಳಾಪುರದ ಫೈತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ರ‍್ಯಾಲಿ ನಡೆಸಿದರು. “ಅಪಸ್ಮಾರ ಪಗಡಿನ ವಿಷಯವಲ್ಲ, ಚಿಕಿತ್ಸೆ ಪಡೆಯೋಣ, ಬದುಕು ಬೆಳಗಿಸೋಣ” ಎಂಬ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಕಭಿ ತಂಡದ ಅಧಿಕಾರಿಗಳು ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಅಪಸ್ಮಾರ ರೋಗದ ಬಗ್ಗೆ ಇನ್ನೂ ಭ್ರಮೆ ಇದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಜನರಲ್ಲಿ ಅರಿವು ಮೂಡಿಸಿ ಅವರ ಜೀವನಮಟ್ಟ ಸುಧಾರಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು.
ಈ ಯೋಜನೆಯ ಭಾಗವಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇದೇ ರೀತಿಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಭಿ ತಂಡ ಮುಂದಾಗಿದೆ ಎಂದು ಹೇಳಿದರು.
ರ‍್ಯಾಲಿ ಬಳಿಕ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅಪಸ್ಮಾರದ ಲಕ್ಷಣಗಳು, ಚಿಕಿತ್ಸೆ ಮತ್ತು ತುರ್ತು ನಿರ್ವಹಣೆಯ ಬಗ್ಗೆ ವಿವರಣೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಂಜುನಾಥ್, ಆಯುಷ್ ಡಾ. ಹರಿಣಿ, ಡಾ.ಗಾಯತ್ರಿ, ಡಾ.ಅಮೃತಾ, ನರ್ಸಿಂಗ್ ಸೂಪರಿಂಟೆಂಡೆಂಟ್‌ಗಳಾದ ಶೈಲಜಾ ಹಾಗೂ ವಂದನಾ, ಕಭಿ ತಂಡದವರು ಉಪಸ್ಥಿತರಿದ್ದರು.
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಛಲವಾದಿ ಮಹಾಸಭಾ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…