ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ಅಪಸ್ಮಾರ ದಿನಾಚರಣೆ- ನರ್ಸಿಂಗ್ ವಿದ್ಯಾರ್ಥಿಗಳ ಜಾಗೃತಿ ರ‍್ಯಾಲಿ

ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಯಲ್ಲಿ ವಿಶ್ವ ಅಪಸ್ಮಾರ ದಿನಾಚರಣೆ (ಎಪಿಲೆಪ್ಸಿ ಡೇ) ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಭಿ (KABHI) ತಂಡದ ಸಮ್ಮಿಲಿತ ಆಯೋಜನೆಯೊಂದಿಗೆ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ದೋಡ್ಡಬಳ್ಳಾಪುರದ ಫೈತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ರ‍್ಯಾಲಿ ನಡೆಸಿದರು. “ಅಪಸ್ಮಾರ ಪಗಡಿನ ವಿಷಯವಲ್ಲ, ಚಿಕಿತ್ಸೆ ಪಡೆಯೋಣ, ಬದುಕು ಬೆಳಗಿಸೋಣ” ಎಂಬ ಘೋಷಣೆಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.

ಕಭಿ ತಂಡದ ಅಧಿಕಾರಿಗಳು ಮಾತನಾಡಿ, ಗ್ರಾಮೀಣ ಮಟ್ಟದಲ್ಲಿ ಅಪಸ್ಮಾರ ರೋಗದ ಬಗ್ಗೆ ಇನ್ನೂ ಭ್ರಮೆ ಇದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಜನರಲ್ಲಿ ಅರಿವು ಮೂಡಿಸಿ ಅವರ ಜೀವನಮಟ್ಟ ಸುಧಾರಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು.

ಈ ಯೋಜನೆಯ ಭಾಗವಾಗಿ ಮುಂದಿನ ದಿನಗಳಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇದೇ ರೀತಿಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಕಭಿ ತಂಡ ಮುಂದಾಗಿದೆ ಎಂದು ಹೇಳಿದರು.

ರ‍್ಯಾಲಿ ಬಳಿಕ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಅಪಸ್ಮಾರದ ಲಕ್ಷಣಗಳು, ಚಿಕಿತ್ಸೆ ಮತ್ತು ತುರ್ತು ನಿರ್ವಹಣೆಯ ಬಗ್ಗೆ ವಿವರಣೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಮಂಜುನಾಥ್, ಆಯುಷ್ ಡಾ. ಹರಿಣಿ, ಡಾ.ಗಾಯತ್ರಿ, ಡಾ.ಅಮೃತಾ, ನರ್ಸಿಂಗ್ ಸೂಪರಿಂಟೆಂಡೆಂಟ್‌ಗಳಾದ ಶೈಲಜಾ ಹಾಗೂ ವಂದನಾ, ಕಭಿ ತಂಡದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

2 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

5 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

7 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

20 hours ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

23 hours ago

ಜಗಳ ಬಿಡಿಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಆರೋಪ: 112 ತುರ್ತು ಸೇವೆ ಸಿಬ್ಬಂದಿಗೆ ಗಾಯ: ಇಬ್ಬರು ಆರೋಪಿಗಳು ವಶಕ್ಕೆ

ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…

1 day ago