ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬೆಲವಂಗಲ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್ ಆಯ್ಕೆಯಾಗಿದ್ದಾರೆ.

ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು 200 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಈ ಪ್ರಶಂಸನಾ ಪದಕವನ್ನು ಘೋಷಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಎ. ಸಲೀಂ ಸೋಮವಾರ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಲವಂಗಲ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಕಲ್ಲಪ್ಪ ಎಸ್. ಖರತ್ ಅವರು ತಮ್ಮ ಸೇವಾ ಅವಧಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ಪ್ರಕರಣಗಳ ಪತ್ತೆಯಲ್ಲಿ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸುವಲ್ಲಿ ತೋರಿದ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಲ್ಲಪ್ಪ ಎಸ್. ಖರತ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಗೌರವದಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ಇಲಾಖೆಗೆ ಮತ್ತಷ್ಟು ಹೆಮ್ಮೆ ತಂದಂತಾಗಿದೆ.

ಇನ್ಸ್ ಪೆಕ್ಟರ್ ಕಲ್ಲಪ್ಪ ಎಸ್. ಖರತ್ ಮಾತನಾಡಿ, ಡಿಜಿ-ಐಜಿಪಿ ಪ್ರಶಂಸನಾ ಪದಕಕ್ಕೆ ಆಯ್ಕೆಯಾಗಿರುವುದಕ್ಕೆ ಸಂತಸ ತಂದಿದೆ. ಜವಾಬ್ದಾರಿ‌ ಇನ್ನಷ್ಟು ಹೆಚ್ಚಾಗಿದೆ‌. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅವಿರತವಾಗಿ ಶ್ರಮಿಸಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

35 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago