ದೊಡ್ಡಬೆಳವಂಗಲದಲ್ಲಿ ಮತದಾನ ಕುರಿತು ಅರಿವು ಕಾರ್ಯಕ್ರಮ: ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೈಕ್ ರ‍್ಯಾಲಿಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಡಾ. ನಾಗರಾಜು ಅವರು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು.

ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಬೇಕಿದ್ದು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಹಕರಿಸಬೇಕೆಂದು ಉಪಕಾರ್ಯದರ್ಶಿ ಅವರು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಅವರು ಮಾತನಾಡಿ ಮುಂಬರುವ ಚುನಾವಣೆಯಲ್ಲಿ ಶೇ.100 ರಷ್ಟು ಮತದಾನವಾಗಬೇಕಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ನೋಂದಾಯಿಸಿಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸಬೇಕೆಂದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತದಾನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.

ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನಕುಮಾರಿ, ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ ಅವರು, ದೊಡ್ಡಬೆಳವಂಗಲ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಓಗಳು, ಕಾರ್ಯದರ್ಶಿಗಳು, ಎಸ್.ಡಿ.ಎ.ಎ, ಕರವಸೂಲಿಗಾರರು, ಡಿಇಓಗಳು, ಜಲಗಾರರು, ಕೃಷಿ, ತೋಟಗಾರಿಕೆ, ರೇಷ್ಮೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗಳ ಹೋಬಳಿ ಮಟ್ಟದ ಅಧಿಕಾರಿಗಳು ಮತ್ತು ನರೇಗಾ ಸಿಬ್ಬಂದಿ ಹಾಜರಿದ್ದರು.

Leave a Reply

Your email address will not be published. Required fields are marked *