ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬೈಕ್ ರ‍್ಯಾಲಿಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಡಾ. ನಾಗರಾಜು ಅವರು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದರು.
ಮತದಾನದ ಶೇಕಡಾವಾರು ಪ್ರಮಾಣ ಹೆಚ್ಚಾಗಬೇಕಿದ್ದು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಸಹಕರಿಸಬೇಕೆಂದು ಉಪಕಾರ್ಯದರ್ಶಿ ಅವರು ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ಅವರು ಮಾತನಾಡಿ ಮುಂಬರುವ ಚುನಾವಣೆಯಲ್ಲಿ ಶೇ.100 ರಷ್ಟು ಮತದಾನವಾಗಬೇಕಿದ್ದು, 18 ವರ್ಷ ಮೇಲ್ಪಟ್ಟ ಎಲ್ಲರೂ ನೋಂದಾಯಿಸಿಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸಬೇಕೆಂದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಮತದಾನದ ಕುರಿತು ಗ್ರಾಮಗಳಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.
ದೊಡ್ಡಬಳ್ಳಾಪುರ ತಹಶೀಲ್ದಾರ್ ಮೋಹನಕುಮಾರಿ, ತಾಲ್ಲೂಕು ಯೋಜನಾಧಿಕಾರಿ ರಾಮಾಂಜನೇಯ ಅವರು, ದೊಡ್ಡಬೆಳವಂಗಲ ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯಿತಿಗಳ ಪಿಡಿಓಗಳು, ಕಾರ್ಯದರ್ಶಿಗಳು, ಎಸ್.ಡಿ.ಎ.ಎ, ಕರವಸೂಲಿಗಾರರು, ಡಿಇಓಗಳು, ಜಲಗಾರರು, ಕೃಷಿ, ತೋಟಗಾರಿಕೆ, ರೇಷ್ಮೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗಳ ಹೋಬಳಿ ಮಟ್ಟದ ಅಧಿಕಾರಿಗಳು ಮತ್ತು ನರೇಗಾ ಸಿಬ್ಬಂದಿ ಹಾಜರಿದ್ದರು.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…