ದೊಡ್ಡಬೆಳವಂಗಲ ಜೋಡಿ ಕೊಲೆ ಪ್ರಕರಣ: ಘಟನೆಗೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ-ಮಾ.ಮುನಿರಾಜು

ತಾಲ್ಲೂಕಿನ ದೊಡ್ಡಬೆಳವಂಗಲ ಜೋಡಿ ಕೊಲೆಯಿಂದಾಗಿ ಶಾಂತಿಯುತವಾಗಿದ್ದ ತಾಲ್ಲೂಕಿನಲ್ಲಿ ಶಾಂತಿ ಕದಡುವ ಪರಿಸ್ಥಿತಿ ನಿರ್ಮಾಣವಾಗಿದೆ, ಇದಕ್ಕೆ ಪೊಲೀಸರು ಹಾಗೂ ರಾಜಕಾರಣಿಗಳೇ ನೇರ ಹೊಣೆ ಎಂದು ದಲಿತ ವಿಮೋಚನಾ‌ ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ಅಭಿಪ್ರಾಯಪಟ್ಟರು.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೊಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಿಂದೆಂದು ಕೇಳರಿಯದ ಘಟನೆಗಳು ತಾಲ್ಲೂಕಿನಲ್ಲಿ ಸಂಭವಿಸುತ್ತಿದೆ, ತಾಲ್ಲೂಕಿನ ರಾಜಕೀಯ ಇತಿಹಾಸದಲ್ಲಿ ಟಿ.ಸಿದ್ದದ್ದಲಿಂಗಯ್ಯ, ಮುಗವಾಳಪ್ಪ, ಕೊಂಗಾಡಿಯಪ್ಪ ರಂತ ಮಹನೀಯರು ದೊಡ್ಡಬಳ್ಳಾಪುರ ನಿರ್ಮಾಣಕ್ಕೆ ಶ್ರಮಿಸಿದ್ದಾರೆ, ಗಣ್ಯರು ಉತ್ತಮ ಆಡಳಿತ ನೀಡಿ ರಾಜಕೀಯ ಮಾಡಿದ್ದಾರೆ ಅವರ ಕಾಲಘಟ್ಟದಲ್ಲಿ ಈ ರೀತಿಯ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ ಎಂದರು.

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚೆಗೆ ಬೇರೆ ಕಡೆಯಿಂದ ವಲಸೆ‌ ಬಂದಿರುವವರು ತಾಲ್ಲೂಕಿನ ಇತಿಹಾಸ ಗೊತ್ತಿಲ್ಲದವರು, ಜನತೆಯ ಸ್ವಾಭಿಮಾನವನ್ನು ಹಾಳು ಮಾಡುತ್ತಿದ್ದಾರೆ, ಆಡಂಬರದ‌ ಬದುಕು ನಡೆಸಿ ಯುವಕರಿಗೆ ನಿತ್ಯ ಕ್ರೀಡಾಕೂಟ, ಔತಣಕೂಟ, ಓಂಶಕ್ತಿ , ಧರ್ಮಸ್ಥಳ ಯಾತ್ರೆಗಳಿಗೆ ಕಳಿಸಿ ಎಲ್ಲರನ್ನು ಭಿಕ್ಷುಕರನ್ನು ಮಾಡುತ್ತಿದ್ದಾರೆ ಎಂದು ಗುಡುಗಿದರು.

ಆಡಂಬರದ ಬದುಕು ನಿಲ್ಲಬೇಕು, ಈ ಆಡಂಬರಕ್ಕೆ ಹಣ ಎಲ್ಲಿಂದ ಬರುತ್ತಿದೆ, ಇದರ ಬಗ್ಗೆ ಅಧಿಕಾರಿಗಳು, ಪೊಲೀಸರು ನಿಗಾ ವಹಿಸಬೇಕು‌ ಎಂದು ಒತ್ತಾಯಿಸಿದರು.

ರಾಜಕಾರಣ ಮಾಡುವುದಾದರೇ ತಾತ್ವಿಕ, ಸಾಮಾಜಿಕ ಚಿಂತನೆ‌ಗಳಿಂದ ರಾಜಕಾರಣ ಮಾಡಬೇಕು ಅದನ್ನು ಬಿಟ್ಟು ಸಮಾಜದ ಸ್ವಾಸ್ಥ್ಯ ಹಾಳುಮಾಡುವ, ಗೂಂಡಾವರ್ತನೆ ಪ್ರಭಾವ ಬೀರುವ, ಗೂಂಡಾ ಸಂಸ್ಕೃತಿ ರಾಜಕಾರಣ ಮಾಡಬಾರದು ಸಾಮಾಜಿಕ ಜವಾಬ್ಧಾರಿಗಳನ್ನು ಅರ್ಥ ಮಾಡಿಕೊಂಡು ರಾಜಕಾರಣ ಮಾಡಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಬೀದಿಗಳಿದು ಹೋರಾಟದ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಪೊಲೀಸರ ಕರ್ತವ್ಯ ಲೋಪಕ್ಕೆ ಎರಡು ಜೀವ ಬಲಿ:

ದೊಡ್ಡಬೆಳವಂಗಲದಲ್ಲಿ ಫೆಬ್ರವರಿ 17 ರಂದು ಕ್ರಿಕೆಟ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ನಡೆದ ಬಗ್ಗೆ ಮಾಹಿತಿ ಪೊಲೀಸರ ಗಮನಕ್ಕೆ ಬಂದಾಗ ಕ್ರಮ ಕೈಗೊಂಡಿದಿದ್ದರೆ ಈ ಜೋಡಿ ಕೊಲೆಗಳು ಆಗುತ್ತಿರಲಿಲ್ಲ, ಸ್ವಲ್ಪ ಅಜಾಗರೂಕರಾಗಿದ್ದರಿಂದ ಎರಡು ಅಮಾಯಕ ಜೀವಗಳು ಬಲಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾಳವ ನಾರಾಯಣ್, ಬೆಂಗಳೂರು ನಗರ ಜಿಲ್ಲೆ ಅಧ್ಯಕ್ಷ ರಮೇಶ್, ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ಇದ್ದರು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

11 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

16 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

19 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago