ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿನ ಆನೆ ಲಿಂಗೇಶ್ವರ ದೇವಸ್ಥಾನದ ಹುಂಡಿಗೆ ಕನ್ನ ಹಾಕಿರುವ ಕಳ್ಳರು ಹಣ ದೋಚಿ ಪರಾರಿಯಾಗಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದ್ದು, ಬೆಳಗ್ಗೆ ಭಕ್ತರೊಬ್ಬರು ದೇವರ ದರ್ಶನಕ್ಕೆಂದು ಹೋದಾಗ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಹುಂಡಿ ಹೊಡೆದಿರುವ ಕಳ್ಳರು ಸುಮಾರು 1 ಲಕ್ಷಕ್ಕೂ ಹೆಚ್ಚು ಹಣವನ್ನ ದೋಚಿರುವುದಾಗಿ ಸ್ಥಳೀಯರು ಹೇಳಿದ್ದಾರೆ.
ಇತ್ತೀಚೆಗೆ ಆನೆ ಲಿಂಗೇಶ್ವರ ದೇವಸ್ಥಾನದ ಜಾತ್ರೆ ಮಹೋತ್ಸವ ನಡೆದಿದ್ದು, ಭಕ್ತರ ಕಾಣಿಕೆ ಹಣ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹವಾಗಿದೆ ಎಂಬ ಮಾಹಿತಿ ಹಿನ್ನೆಲೆ ಕಳ್ಳರು ಕೃತ್ಯ ಎಸೆಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅದೇ ರೀತಿ ದೊಡ್ಡಬೆಳವಂಗಲ ಠಾಣಾ ವ್ಯಾಪ್ತಿಯ ಕೆಲ ಗ್ರಾಮಗಳಲ್ಲಿ ಹಗಲಿನಲ್ಲಿ ಬೀಗ ಹಾಕಿರುವ ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡಿಕೊಂಡು ಹೋಗಿರುವ ಪ್ರಕರಣಗಳು ಹೆಚ್ಚಾಗಿ ದಾಖಲಾಗಿದ್ದು, ಈ ಹಿನ್ನೆಲೆ ಕಳ್ಳತನ ಪ್ರಕರಣಗಳು ಉಂಟಾಗದಂತೆ ಜನರಿಗೆ ತಿಳುವಳಿಕೆ ನೀಡಲು ಅಧಿಕಾರಿ ಮತ್ತು ಸಿಬ್ಬಂದಿಯನ್ನು ನೇಮಿಸಿ ಪರಿಶೀಲನೆ ನಡೆಸಲಾಗುತ್ತಿದೆ.
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…
ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…
ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…
ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…