
ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಅವರು ವರ್ಗಾವಣೆಗೊಂಡಿದ್ದಾರೆ. ನೂತನ ಇನ್ಸ್ ಪೆಕ್ಟರ್ ಆಗಿ ಡಿ.ಎಚ್ ಮುನಿಕೃಷ್ಣ ನೇಮಕವಾಗಿದ್ದಾರೆ.

ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಅವರು ಲೋಕಸಭಾ ಚುನಾವಣಾ ನಿಮಿತ್ತ ದೊಡ್ಡಬೆಳವಂಗಲ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಸದ್ಯ ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆಯಾಗಿದ್ದಾರೆ.

ಇನ್ಸ್ ಪೆಕ್ಟರ್ ಡಿ.ಎಚ್ ಮುನಿಕೃಷ್ಣ ಅವರು ಈ ಮೊದಲು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸಿದ್ದರು. ಇದೀಗ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ನೂತನ ಇನ್ಸ್ ಪೆಕ್ಟರ್ ಆಗಿ ಡಿ.ಎಚ್ ಮುನಿಕೃಷ್ಣ ನೇಮಕವಾಗಿದ್ದಾರೆ.
