ದೊಡ್ಡಬೆಳವಂಗಲ ಪೊಲೀಸ್ ಠಾಣೆ ಎಎಸ್ಐ ಕೃಷ್ಣ ಸಿ.ಎನ್‌ಗೆ ಮುಖ್ಯಮಂತ್ರಿ ಪದಕ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಾಧಾರಣ ಸೇವೆ ಹಾಗೂ ದಕ್ಷತೆ ತೋರಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕವನ್ನು ಪ್ರಕಟ ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಎಎಸ್‌ಐ ಕೃಷ್ಣ ಸಿ.ಎನ್ ಅವರು 2025ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ತಂದೆ ನಂಜಪ್ಪ ಗೌಡ, ತಾಯಿ ಲಕ್ಷ್ಮಮ್ಮ ಅವರ ಮಗನಾದ ಇವರು ಕಳೆದ 29 ವರ್ಷದಿಂದ ಪೊಲೀಸ್ ಇಲಾಖೆಯ ವಿವಿಧ ಠಾಣೆಗಳಲ್ಲಿ ಹಲವು ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ದರೋಡೆ, ಕೊಲೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ತನಿಖಾಧಿಕಾರಿ ಸೇವೆ ಸಲ್ಲಿಸಿದ್ದಾರೆ. ಇಲಾಖೆಯಲ್ಲಿ ‘ತನಿಖಾಧಿಕಾರಿ’ ಎಂದೇ ಖ್ಯಾತಿ ಪಡೆದಿದ್ದಾರೆ.

ದೊಡ್ಡಬಳ್ಳಾಪುರದ ದೊಡ್ಡಬೆಳವಂಗಲ ಠಾಣೆಯಲ್ಲಿ ಕಳೆದ 3 ವರ್ಷಗಳಿಂದ ಎಎಸ್ಐ ಆಗಿ ಸೇವೆ ಸಲ್ಲಿಸುತ್ತಿದ್ದು, ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತಂಡದಲ್ಲಿ ತನಿಖಾ ಅಧಿಕಾರಿಯಾಗಿಯೂ ಕೂಡ ಕಾರ್ಯ ನಿರ್ವಹಿಸುತ್ತಿದ್ದಾರೆ.

ದಕ್ಷ ಅಧಿಕಾರಿಯಾಗಿರುವ ಇವರು ಸಾಕಷ್ಟು ಪ್ರಕರಣಗಳ ತನಿಖೆಯಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿದ್ದಾರೆ‌ ಎನ್ನಲಾಗಿದೆ. ತನಿಖೆ ಪ್ರಕರಣಗಳಲ್ಲಿನ ಸೇವೆಯನ್ನು ಗುರುತಿಸಿ ಇದೀಗ ಸಿಎಂ ಪ್ರಶಸ್ತಿಯನ್ನು ನೀಡಲಾಗಿದೆ.

Ramesh Babu

Journalist

Recent Posts

ನಿಗದಿಯಂತೆ ಭಾನುವಾರವೇ ಶ್ರೀರಾಮ ಶೋಭಾಯಾತ್ರೆ ಆಚರಣೆ

ನಾಳೆ (ಭಾನುವಾರ) ನಡೆಯಬೇಕಿದ್ದ ಶ್ರೀರಾಮ ಶೋಭಾಯಾತ್ರೆ ಆಚರಣೆಗೆ ಡಿಜೆ ಬಳಕೆ ಅನುಮತಿ ವಿಚಾರದಲ್ಲಿ ಪೊಲೀಸ್ ಇಲಾಖೆ ಮತ್ತು ಆಯೋಜಕರಾದ ಬಜರಂಗದಳ…

12 hours ago

ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ವರ್ಗಾವಣೆ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ತನಿಖಾಧಿಕಾರಿಯಾಗಿದ್ದ ಸಬ್ ಇನ್ಸ್ ಪೆಕ್ಟರ್ ವಿ.ವರಲಕ್ಷ್ಮಿ ಅವರು ವರ್ಗಾವಣೆಗೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ…

14 hours ago

ಶ್ರೀರಾಮ ಶೋಭಾಯಾತ್ರೆ: ಡಿಜೆ ಅನುಮತಿಗಾಗಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಶ್ರೀರಾಮ ಶೋಭಾಯಾತ್ರೆಗೆ ಡಿಜೆ ಪರ್ಮಿಷನ್ ಕೊಡುವಂತೆ ಒತ್ತಾಯಿಸಿ ದೊಡ್ಡಬಳ್ಳಾಪುರ ನಗರದ ಡಿವೈಎಸ್ಪಿ ಕಚೇರಿ ಎದುರು ಶ್ರೀರಾಮ ಭಜನೆ ಮಾಡುತ್ತಾ ಹಿಂದೂ…

14 hours ago

ಬಿರಿಯಾನಿಗಾಗಿ ಮಿಡ್ ನೈಟ್ ರೈಡ್ ಬಂದವರು ದುರ್ಮರಣ

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು - ಮಂಗಳೂರು…

19 hours ago

ಘಾಟಿ ಸುಬ್ರಹ್ಮಣ್ಯ ದೇಗುಲ ಸಮೀಪ ಚಿರತೆ ಪ್ರತ್ಯಕ್ಷ: ಬೆಚ್ಚಿಬಿದ್ದ ಜನ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲ ಕೂಗಳತೆ ದೂರದಲ್ಲೇ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ...…

1 day ago

111.355 ಕೆ.ಜಿ ಗಾಂಜಾ ನಾಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ…

2 days ago