ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾಲೂಕಿನ ಚಿಟವುಲ ಹಳ್ಳಿ ಗ್ರಾಮದ 40 ಅಂಜನ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗೌರಿಬಿದನೂರು ನಗರದ ಹೊರವಲಯದಲ್ಲಿರುವ ಶ್ರೀ ಕಾಲಿನಾಥೇಶ್ವರ ದೇವಸ್ಥಾನದ ಬಳಿ ನಡೆದಿದೆ.
ತಾಲೂಕಿನ ಚಿಟವುಲ ಹಳ್ಳಿ ಗ್ರಾಮದ ಅಂಜನ್ ಕುಮಾರ್ ಹೆಂಡತಿ ಇಂದೂ ತನ್ನ 5 ವರ್ಷದ ಮಗ ಅರ್ಜುನನ್ನು ಆಸ್ಪತ್ರೆಗೆ ತೋರಿಸಲೆಂದು KA-02-JD-3854 ದ್ವಿಚಕ್ರ ವಾಹನದಲ್ಲಿ ಗೌರಿಬಿದನವರಿಗೆ ಮೂರು ಜನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ಈ ವೇಳೆ ಗೌರಿಬಿದನೂರು ಕಡೆಯಿಂದ KA-40-EK-3109 ಎಂಬ ದ್ವಿಚಕ್ರ ವಾಹನದಲ್ಲಿ ತಾಲ್ಲೂಕಿನ ಹುದುಗೂರು ಗ್ರಾಮದ ನಿವಾಸಿ ಲಿಖಿತ್ ಬಾಬು ಹೋಗುತ್ತಿದ್ದು ಎರಡು ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಸಂಭವಿಸಿ ಈ ಘಟನೆ ನಡೆದಿದೆ.
ಗಾಯಾಳುಗಳನ್ನು ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದು, ಲಿಖಿತ್ ಬಾಬು, ಇಂದೂ ಮತ್ತು ಅರ್ಜುನ್ ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗೌರಿಬಿದನೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…
ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…
ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…
ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…