ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ದ್ವಿಚಕ್ರ ವಾಹನ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಆಗಸ್ಟ್ 21 ರಿಂದ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‌ನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9380162042 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…