ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿ ಕೇಂದ್ರದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ.
ಗ್ರಾಮಾಂತರ ಪ್ರದೇಶದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಕಲೆ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳಿದ್ದು, ವಾಣಿಜ್ಯ ವಿಭಾಗದಲ್ಲಿ ಧನ್ಯ ಕುಮಾರ್ 538, ಶಾಮ ಶಂಕರ ನಾಯಕ್ 528, ಸಂತೋಷ ಜಿ 516, ಮತ್ತು ಪಲ್ಲವಿ 516, ಅಂಕಗಳನ್ನು ಪಡೆದು ಅತ್ಯುನ್ನತ ಶ್ರೇಣಿ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸಾರಿಕಾ, ಕಲಾ ವಿಭಾಗದಲ್ಲಿ ಶ್ರೀಧರ್, ಪ್ರಥಮ ದರ್ಜೆಯಲ್ಲಿ ತೇರ್ಗಡೆಗೊಂಡು ಕಾಲೇಜಿಗೆ ಮೊದಲಿಗರಾಗಿದ್ದಾರೆ.
ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳನ್ನು ಪ್ರಾಂಶುಪಾಲರು, ಕಾಲೇಜಿನ ಉಪನ್ಯಾಸಕ ವರ್ಗ ಮತ್ತು ಕಾಲೇಜಿನ ಅಭಿವೃದ್ಧಿ ಪದಾಧಿಕಾರಿಗಳ ಸಮಿತಿ ಅಭಿನಂದಿಸಿದ್ದಾರೆ.