2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 79.70 ರಷ್ಟು ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ 8ನೇ ಸ್ಥಾನವನ್ನು ಪಡೆದಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 10935 ವಿದ್ಯಾರ್ಥಿಗಳ ಪೈಕಿ 8361 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಜಿಲ್ಲೆಯು ಶೇ. 76.46 ರಷ್ಟು ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳಲ್ಲಿ 2024-25ನೇ ಸಾಲಿನಲ್ಲಿ ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾದ 10354 ವಿದ್ಯಾರ್ಥಿಗಳ ಪೈಕಿ 8252 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 79.70 ರಷ್ಟು ಫಲಿತಾಂಶ ದೊರಕಿದೆ.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 4893 ಬಾಲಕರು ಹಾಜರಾಗಿದ್ದು, 3530 ಬಾಲಕರು ತೇರ್ಗಡೆಯಾಗುವ ಮೂಲಕ ಶೇ. 72.14 ರಷ್ಟು ಫಲಿತಾಂಶ ಹಾಗೂ 6042 ಬಾಲಕಿಯರು ಪರೀಕ್ಷೆಗೆ ಹಾಜರಾಗಿದ್ದು, 4831 ಬಾಲಕಿಯರು ತೇರ್ಗಡೆ ಹೊಂದುವ ಮೂಲಕ ಶೇ. 79.96 ರಷ್ಟು ಫಲಿತಾಂಶ ದೊರಕಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಕಲಾ ವಿಭಾಗದಿಂದ 1126 ವಿದ್ಯಾರ್ಥಿಗಳು ಹಾಜರಾಗಿದ್ದು,527 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 46.8 ರಷ್ಟು ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗದಿಂದ 5249 ವಿದ್ಯಾರ್ಥಿಗಳು ಹಾಜರಾಗಿದ್ದು, 3959 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 75.42 ರಷ್ಟು ಫಲಿತಾಂಶ ದೊರೆತಿದೆ.
ವಿಜ್ಞಾನ ವಿಭಾಗದಿಂದ 4560 ವಿದ್ಯಾರ್ಥಿಗಳು ಹಾಜರಾಗಿದ್ದು, 3875 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 84.98 ರಷ್ಟು ಫಲಿತಾಂಶ ಪಡೆದಿದೆ.
ನಗರ ಪ್ರದೇಶದ 8479 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 6531 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.77.03 ರಷ್ಟು ಫಲಿತಾಂಶ ದೊರೆತಿದೆ.
ಗ್ರಾಮೀಣ ಪ್ರದೇಶದ 2456 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1830 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ. 74.51 ರಷ್ಟು ಫಲಿತಾಂಶ ದೊರೆತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…