ದ್ವಿತೀಯ ಪಿಯು ಪರೀಕ್ಷೆ: ಮಾ.01 ರಿಂದ 22ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ 2024ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 22 ರವರೆಗೆ ನಡೆಯಲಿದ್ದು. 15 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಲು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಿ.ಆರ್.ಪಿ.ಸಿ 1973, ಕಲಂ 144 ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮಾರ್ಚ್ 01 ರಿಂದ ಮಾರ್ಚ್ 22 ರವರೆಗೆ ಪರೀಕ್ಷಾ ನಡೆಯುವ ದಿನಗಳಂದು ಪರೀಕ್ಷಾ ಸ್ಥಳದ ಸುತ್ತಮುತ್ತಲು 200 ಮೀಟರ್ ಪ್ರದೇಶಗಳ ವ್ಯಾಪ್ತಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ಅವರು ಆದೇಶಿಸಿದ್ದಾರೆ.

2024ರ ಮಾರ್ಚ್ ಮಾಹೆಯಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 01 ರಿಂದ ಮಾರ್ಚ್ 22 ರವರೆಗೆ ಪರೀಕ್ಷೆಗಳು ನಡೆಯಲಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀ ಬಸವೇಶ್ವರ ಪದವಿ ಪೂರ್ವ ಕಾಲೇಜು, ಶ್ರೀ ಬಸವೇಶ್ವರ ಬಾಲಕಿಯರ ಪದವಿ ಪೂರ್ವ ಕಾಲೇಜು, ಹೊಯ್ಸಳ ಪದವಿ ಪೂರ್ವ ಕಾಲೇಜು ಪರಮಣ್ಣ ಲೇಔಟ್, ಸರ್ಕಾರಿ ಪದವಿ ಪೂರ್ವ ಕಾಲೇಜು ತ್ಯಾಮಗೊಂಡ್ಲು.

ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು,ದೇವರಾಜ್ ಅರಸ್ ಪದವಿ ಪೂರ್ವ ಕಾಲೇಜು ಕೊಡಿಗೇನಹಳ್ಳಿ.

ದೇವನಹಳ್ಳಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ದೇವನಹಳ್ಳಿ, ಸರ್ಕಾರಿ ಪದವಿ ಪೂರ್ವ ಕಾಲೇಜು ವಿಜಯಪುರ, ಪ್ರಗತಿ ಬಾಲಕಿಯರ ಪದವಿ ಪೂರ್ವ ಕಾಲೇಜು ವಿಜಯಪುರ.

ಹೊಸಕೋಟೆ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸಕೋಟೆ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹೊಸಕೋಟೆ, ಸರ್ಕಾರಿ ಪದವಿ ಪೂರ್ವ ಕಾಲೇಜು ನಂದಗುಡಿ, ಮಹದೇವ ಪದವಿ ಪೂರ್ವ ಕಾಲೇಜು ಹೊಸಕೋಟೆ. ಈ ಎಲ್ಲಾ 15 ಪರೀಕ್ಷಾ ಕೇಂದ್ರ ಸ್ಥಳಗಳ ಸುತ್ತಮುತ್ತಲು 200 ಮೀಟರ್ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸೆಕ್ಷನ್ 144 ಸಿ.ಆರ್.ಪಿ.ಸಿ ರೀತ್ಯಾ ನಿಷೇದಾಜ್ಞೆಯನ್ನು ವಿಧಿಸಲಾಗಿದೆ.

Leave a Reply

Your email address will not be published. Required fields are marked *