ಪ್ರಸಕ್ತ ಸಾಲಿನ (2024-25) ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿದೆ.
ಮಾರ್ಚ್ 1 ರಿಂದ 19ರ ವರೆಗೆ ದ್ವೀತಿಯ ಪಿಯುಸಿ ಪರೀಕ್ಷೆಗಳು ನಡೆದರೆ, ಮಾರ್ಚ್ 20 ರಿಂದ ಏಪ್ರಿಲ್ 2ರ ವರೆಗೆ ಎಸ್ಎಸ್ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಬಹುತೇಕ ತಾತ್ಕಾಲಿಕ ವೇಳಾಪಟ್ಟಿಯೇ ಅಂತಿಮವಾಗಲಿದೆ.
ವೇಳಾಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 15 ದಿನ ಕಾಲಾವಕಾಶ ನೀಡಿಲಾಗಿದ್ದು, ಡಿ.16ರ ಒಳಗೆ ಆಕ್ಷೇಪಣೆಯಲ್ಲಿ ಬೋರ್ಡ್ ಸಲ್ಲಿಕೆ ಮಾಡಬಹುದಾಗಿದೆ.
ದ್ವೀತಿಯ ಪಿಯುಸಿ ಪರೀಕ್ಷೆ- ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್.
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್ 8- ಹಿಂದಿ.
ಮಾರ್ಚ್ 10- ಐಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲೀಷ್
ಮಾರ್ಚ್ 17- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 18- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್.
SSLC ಪರೀಕ್ಷೆ -1 ವೇಳಾಪಟ್ಟಿ
ಮಾರ್ಚ್ 20- ಪ್ರಥಮ ಭಾಷೆ ವಿಷಯಗಳು
ಮಾರ್ಚ್ 22- ಸಮಾಜ ವಿಜ್ಞಾನ
ಮಾರ್ಚ್ 24- ದ್ವಿತೀಯ ಭಾಷೆ ವಿಷಯಗಳು
ಮಾರ್ಚ್ 27- ಗಣಿತ
ಮಾರ್ಚ್ 29- ತೃತೀಯ ಭಾಷೆ ವಿಷಯಗಳು
ಏಪ್ರಿಲ್ 2- ವಿಜ್ಞಾನ
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…