ದ.ರಾ. ಬೇಂದ್ರೆಯವರ ಕಾವ್ಯವು ಕನ್ನಡ ಭಾಷೆ ಹಾಗೂ ಸಾಹಿತ್ಯದ ಅನನ್ಯತೆಯನ್ನು ಹೆಚ್ಚಿಸಿದೆ. ಬೇಂದ್ರೆಯವರ ಕಾವ್ಯದ ಮತ್ತೊಂದು ವೈಶಿಷ್ಟ್ಯ ಎಂದರೆ ಬದುಕೇ ಕಾವ್ಯವಾಗಿರುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್ ತಿಳಿಸಿದರು.
ನಗರದ ಎಂ.ಎ.ಬಿ.ಎಲ್ ಪ್ರೌಢಶಾಲೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ನಡೆದ ಡಾ.ದ.ರಾ.ಬೇಂದ್ರೆಯವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಕನ್ನಡ ಸುಗಮ ಸಂಗೀತವನ್ನು ಶ್ರೀಮಂತಗೊಳ್ಳುವಲ್ಲಿ ಬೇಂದ್ರೆಯವರ ಗೀತೆಗಳು ಪ್ರಮುಖ ಪಾತ್ರವಹಿಸಿವೆ. ಜೀವನಪ್ರೀತಿ, ಮಾನವೀಯ ಅಂತಃಕರಣ ಮೊದಲಾದ ಮೌಲ್ಯಗಳನ್ನು ಪ್ರತಿಪಾದಿಸುವ ಬೇಂದ್ರೆಯವರ ಭಾವಗೀತೆಗಳು ಸಾಮಾಜಿಕ ಸ್ವಾಸ್ಥ್ಯಕ್ಕೆ ಸಹಕಾರಿಯಾಗಿವೆ ಎಂದರು.
ಕಾವ್ಯವಾಚನದಲ್ಲಂತೂ ಬೇಂದ್ರೆಯವರದು ಅಸದೃಶವಾದ ಸೃಜನಶೀಲ ಪ್ರತಿಭೆ. ಬೇಂದ್ರೆಯವರ ವ್ಯಕ್ತಿತ್ವ ಕನ್ನಡಿಗರ ಮೇಲೆ ಪ್ರಭಾವ ಬೀರಿದ್ದೆ ಅವರ ಕಾವ್ಯದ ವಾಚನದ ಮೂಲಕ ಎನ್ನಬಹುದು. ಅವರ ಭಾವಗೀತೆಗಳು, ಗೀತೆಗಳು ಯುವ ಕವಿಗಳಿಗೆ ಸದಾ ಸ್ಪೂರ್ತಿದಾಯಕವಾಗಿವೆ. ಕನ್ನಡಕ್ಕೆ ಜ್ಞಾನಪೀಠದ ಗರಿಯನ್ನು ತಂದುಕೊಟ್ಟ ಬೇಂದ್ರೆಯವರು ಕನ್ನಡಿಗರ ಮನಸ್ಸಿನಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯಶಿಕ್ಷಕಿ ಸಿ.ನಿರ್ಮಲ ಮಾತನಾಡಿ, ಮಕ್ಕಳು ಭಾವಗೀತೆಗಳನ್ನು ಹಾಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಗಾಯನ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಲು ವಿಫುಲ ಅವಕಾಶಗಳಿವೆ. ಈ ಸದಾವಕಾಶವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ದ.ರಾ.ಬೇಂದ್ರೆ ವಿರಚಿತ ಗೀತೆಗಳನ್ನು ಹಾಡುವ ಮೂಲಕ ವರಕವಿಗೆ ಗೀತನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…