ಕಿಡಿಗೇಡಿಗಳ ಕೃತ್ಯಕ್ಕೆ ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆಗಳ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಗಡ್ಡಂಬಚ್ಚಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳ ಹಿಂದೆ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರೈತ ಮಂಜುನಾಥ್ ಅವರಿಗೆ ಸೇರಿದ ಹುಲ್ಲಿನ ಬಣವೆ ಸುಟ್ಟು ಕರಕಲಾಗಿದೆ. ಜಾನುವಾರುಗಳಿಗೆ ಶೇಖರಿಸಿದ್ದ ಹುಲ್ಲಿನ ಬಣವೆ ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ. ಸ್ಥಳದಲ್ಲಿ ಪೆಟ್ರೋಲ್ ತಂದಿದ್ದ ಬಾಟಲ್ ಪತ್ತೆ ಕೂಡ ಪತ್ತೆಯಾಗಿದೆ. ಈ ಹಿನ್ನೆಲೆ ಯಾರೋ ಕಿಡಿಗೇಡಿಗಳು ಬೇಕಂತಲೇ ಹುಲ್ಲಿನ ಬಣವೆಗೆ ಕಿಡಿಹಚ್ಚಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇಂತಹ ಕೃತ್ಯಗಳು ತಾಲೂಕಿನಲ್ಲಿ ಪದೇ ಪದೇ ಮರುಕಳಿಸುತ್ತಿವೆ. ಇದರಿಂದ ರೈತರು ಸಾಕಷ್ಟು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಇದರಲ್ಲಿ ಭಾಗಿಯಾಗುತ್ತಿರುವ ಕಿಡಿಗೇಡಿಗಳನ್ನ ಪತ್ತೆ ಹಚ್ಚಿ ಕಾನೂನು ಶಿಕ್ಷೆಗೆ ಒಳಪಡಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…
Understanding ESA Letters for Mental Health Support The Role of ESA Letters in Mental Health…
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…