ಧರ್ತಿ ಆಬಾ ಅಭಿಯಾನದಡಿ 14 ಗ್ರಾಮಗಳ ಆಯ್ಕೆ

ಭಾರತ ಸರ್ಕಾರ ಹಾಗೂ ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ ನವದೆಹಲಿ ರವರು ಜನ್ ಜಾತಿಯ ಗೌರವ್ ವರ್ಷದ ಅಂಗವಾಗಿ ಧರ್ತಿ ಅಭಾ ಜನ್ ಜಾತೀಯ ಉತ್ಕರ್ಷ ಅಭಿಯಾನ ಕೈಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 14 ಗ್ರಾಮಗಳಲ್ಲಿ ಅಭಿಯಾನ ನಡೆಯಲಿದೆ.

ಧರ್ತಿ ಅಭಾ ಜನ್ ಜಾತೀಯ ಉತ್ಕರ್ಷ ಅಭಿಯಾನದಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ. ಚುನಾವಣಾ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಆಯುಷ್ಮಾನ್ ಭಾರತ್ ಕಾರ್ಡ್. ಜನದನ್ ಬ್ಯಾಂಕ್ ಖಾತೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ, ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಯೋಜನೆ, ಕಿಸಾನ್ ಕ್ರೇಡಿಟ್ ಕಾರ್ಡ್, ಪಿ.ಎಂ.ಕಿಸಾನ್, ಎಮ್.ಜಿ.ನರೇಗಾ, ವೃದ್ದಾಪ್ಯ ವೇತನಾ. ಪಿ.ಎಂ.ವಿಶ್ವರ‍್ಮ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ. ವಿಕಲಾಂಗ ವೇತನಾ, ವಿಧವಾ ವೇತನಾ. ಮುದ್ರಾ ಯೋಜನೆ, ಖಾಯಂ ನಿವಾಸಿ ದೃಢೀಕರಣ ಪತ್ರ ಮುಂತಾದ ದಾಖಲಾತಿಗಳನ್ನು 14 ಗ್ರಾಮಗಳಲ್ಲಿ ಶಿಬಿರಗಳನ್ನು ಆಯೋಜಿಸಿ ಮಾಡಿಕೊಡಲಾಗುವುದು.

*ಆಯ್ಕೆಯಾಗಿರುವ 14 ಗ್ರಾಮಗಳು*

ದೇವನಹಳ್ಳಿ ತಾಲ್ಲೂಕಿನ ಹೊಲೇರಹಳ್ಳಿ, ವೆಂಕಟೇನಹಳ್ಳಿ, ಚಿಕ್ಕ ತತ್ತಮಂಗಲ, ಕೆಂಪೇನಹಳ್ಳಿ, ಯರ್ತಿಗಾನಹಳ್ಳಿ, ಭುವನಹಳ್ಳಿ ರಾಯಸಂದ್ರ, ಬಮ್ಮನಹಳ್ಳಿ, ಜೊನ್ನಹಳ್ಳಿ, ಕೊಂಡೆನಹಳ್ಳಿ. ದೊಡ್ಡಬಳ್ಳಾಪುರ ತಾಲ್ಲೂಕಿನ ಗುಮ್ಮನಹಳ್ಳಿ, ಬೊಮ್ಮನಹಳ್ಳಿ.
ಹೊಸಕೋಟೆ ತಾಲ್ಲೂಕಿನ ವಲಗೇರೆಪುರ.

ಶಿಬಿರವು ಜೂನ್ 15 ರಿಂದ 30 ರ ವರೆಗೆ ಆಯೋಜನೆ ಮಾಡಲಾಗಿದ್ದು 14 ಗ್ರಾಮಗಳಲ್ಲಿನ ಎಲ್ಲಾ ಬುಡಕಟ್ಟು ಜನಾಂಗದವರು ಈ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ರವರನ್ನು, 080-29787448, ದೇವನಹಳ್ಳಿ 080-27681784, ದೊಡ್ಡಬಳ್ಳಾಪುರ-080-27629681 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

‘ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ’…

ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…

5 hours ago

ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಸ್ನೇಹಿತರು ಸಾವು

ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…

6 hours ago

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

19 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

19 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

20 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

1 day ago