ಧರ್ಮದ ಹೆಸರಲ್ಲಿ ದ್ವೇಷಿಸುವುದು ಅಮಾನವೀಯ, ಕೆಟ್ಟ ನಡವಳಿಕೆ- ಸಿಎಂ ಸಿದ್ದರಾಮಯ್ಯ

ಧರ್ಮದ ಹೆಸರಲ್ಲಿ, ಜಾತಿಯ ಹೆಸರಲ್ಲಿ ಮುಸ್ಲಿಂಮರನ್ನು, ದಲಿತರನ್ನು, ಶೂದ್ರರನ್ನು, ಶ್ರಮಿಕ‌ ವರ್ಗದವರನ್ನು ದ್ವೇಷಿಸುವುದು ಅತ್ಯಂತ ಅಮಾನವೀಯವಾದ, ಕೆಟ್ಟ ನಡವಳಿಕೆ. ಜನರಿಗೆ ಅರ್ಥ ಆಗುವ ರೀತಿಯಲ್ಲಿ ಸರಳವಾದ ಜನರ ಭಾಷೆಯಲ್ಲಿ ಮನುಷ್ಯನ ಮೌಲ್ಯಗಳನ್ನು ಬಸವಾದಿ ಶರಣರು ಹೇಳಿದ್ದಾರೆ. ನಾರಾಯಣ ಗುರುಗಳು, ಒಂದೇ ಜಾತಿ-ಒಂದೇ ಮತ-ಒಂದೇ ದೇವರು ಎಂದರು. ಕನಕದಾಸರು ಮತ್ತು ಬಸವಾದಿ ಶರಣರು ಹೇಳಿದ್ದೂ ಇದೇ ಮೌಲ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಸವಿತಾ ಸಮಾಜ ಗಾಂಧಿ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕ ಡಾ.ಎಂ.ಎಸ್.ಮುತ್ತುರಾಜ್ ಅವರ “ಮಂಗಳವಾದ್ಯ” ಕಾದಂಬರಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ನಟರಾಗಿ ಜನಪ್ರಿಯತೆಗಳಿಸಿರುವ ಎಂ.ಆರ್.ಮುತ್ತುರಾಜ್ ಅವರು ಬಹುಮುಖ ಪ್ರತಿಭೆ. ವೃತ್ತಿ ಘನತೆಯನ್ನು ಕಾಪಾಡುವ ವ್ಯಕ್ತಿತ್ವ. ಇವರು ಕಾಯಕ ಜೀವಿ. ಪ್ರತಿಯೊಬ್ಬರೂ ಘನತೆಯಿಂದ ಕಾಯಕ ಮಾಡಬೇಕು. ಇದನ್ನೇ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದ್ದಾರೆ. ಕೈಲಾಸ, ಸ್ವರ್ಗ, ನರಕ ಎನ್ನುವುದು ಬೇರೆಲ್ಲೂ ಇಲ್ಲ. ಎಲ್ಲವೂ ಇಲ್ಲೇ ಇದೆ. ಯಾವ ಕಾಯಕವು ಮೇಲೂ ಅಲ್ಲ, ಯಾವುದು ಕೀಳು ಅಲ್ಲ. ಎಲ್ಲ ಕಾಯಕವೂ ಸಮಾನ ಮಹತ್ವ ಮತ್ತು ಸಮಾನ ಘನತೆ ಹೊಂದಿವೆ ಎಂದರು.

ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ ಎಂದು ಬಸವಣ್ಣನವರು ಹೇಳಿದ್ದು ಇದೇ ಕಾರಣಕ್ಕೆ. ಪರಸ್ಪರ ಮನುಷ್ಯರನ್ನು ಮನುಷ್ಯರು ಗೌರವಿಸುವುದೇ ದೊಡ್ಡ ಮೌಲ್ಯ. ಮನುಷ್ಯ ದ್ವೇಷಕ್ಕಿಂತ ಕೆಟ್ಟ ಮೌಲ್ಯ ಬೇರೆ ಇಲ್ಲ. ಅದಕ್ಕೇ ರಾಷ್ಟ್ರಕವಿ ಕುವೆಂಪು ಅವರು “ಸರ್ವ ಜನಾಂಗದ ಶಾಂತಿಯ ತೋಟ”  ಎಂದು ಕರೆದಿದ್ದಾರೆ ಎಂದು ತಿಳಿಸಿದರು.

ನಿಮ್ಮನ್ನು ಯಾವ ದೇವಸ್ಥಾನಕ್ಕೆ ಒಳಗೆ ಬಿಡುವುದಿಲ್ಲವೋ ಆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಿ ನೀವೇ ದೇವಸ್ಥಾನ ಕಟ್ಟಿ, ನೀವೇ ಪೂಜೆ ಮಾಡಿ ಎಂದು ನಾರಾಯಣಗುರುಗಳು ಹೇಳಿದ್ದಾರೆ. ಇದನ್ನು ಪಾಲಿಸಬೇಕು. ದೇವರಿದ್ದಾನೆ, ಆದರೆ ದೇವರು ದೇವಸ್ಥಾನದಲ್ಲಿ ಮಾತ್ರ ಇದ್ದಾನೆ ಎನ್ನುವುದು ಸರಿಯಲ್ಲ. ಎಲ್ಲಾ ಕಡೆಯೂ ದೇವರಿದ್ದಾನೆ. ಅದಕ್ಕೇ ಶರಣರು, “ಉಳ್ಳವರು ದೇವಸ್ಥಾನವ ಮಾಡುವರು. ನಾನೇನು ಮಾಡಲಯ್ಯ ಬಡವ” ಎಂದಿದ್ದಾರೆ ಎಂದು ಹೇಳಿದರು.

ನಾನು ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡುತ್ತೇನೆ. ನಾವು ರೂಪಿಸುವ ಕಾರ್ಯಕ್ರಮಗಳು ಬಡವರ ಪರವಾಗಿ ಇರುತ್ತವೆ. ನಮ್ಮ‌ ಕಾರ್ಯಕ್ರಮಗಳು ಮನೆ ಮನೆ ತಲುಪಿವೆ. ಬಿಜೆಪಿಯವರ ಟೀಕೆಗೆ ಜನ ಬೆಲೆ ಕೊಡಲ್ಲ. ನಾನೂ ಕೊಡಲ್ಲ. ನಾಡಿನ ಜನ ನಮ್ಮ ಜೊತೆಗಿದ್ದಾರೆ ಎಂದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಸಚಿವ ಎಚ್.ಎಂ.ರೇವಣ್ಣ, ಪ್ರಗತಿಪರ ಚಿಂತಕ ಎಲ್.ಮುಕುಂದರಾಜ್ ಮತ್ತು ಸವಿತ ಸಮಾಜದ ಅಧ್ಯಕ್ಷರಾದ ಕಿರಣ್ ಕುಮಾರ್ ಅವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

3 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

10 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

11 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

24 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

24 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

24 hours ago