Categories: ರಾಜ್ಯ

ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣ: ಸಾಕ್ಷಿದಾರ ಮಾಸ್ಕ್‌ಮ್ಯಾನ್ ಬಂಧನ

ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು (ಎಸ್‌ಐಟಿ) ಸಾಕ್ಷಿದಾರ ಮಾಸ್ಕ್‌ಮ್ಯಾನ್‌ ನನ್ನು ಬಂಧನ ಮಾಡಲಾಗಿದೆ. ಧರ್ಮಸ್ಥಳದಲ್ಲಿ ಎಸ್‌ಐಟಿ ಮುಖ್ಯಸ್ಥರ ಉಪಸ್ಥಿತಿಯಲ್ಲಿಯೇ ವಶಕ್ಕೆ ಪಡೆಯಲಾಗಿದೆ.‌ ಇದರಿಂದ ಧರ್ಮಸ್ಥಳದಲ್ಲಿ ಶವಗಳ ಸಾಮೂಹಿಕ ಹೂತಿಟ್ಟ ಪ್ರಕರಣಕ್ಕೆ ಹೊಸ ತಿರುವು ಸಿಗುತ್ತಿದೆ.

ಧರ್ಮಸ್ಥಳ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದಾರನು ತೋರಿಸಿದ 20 ಕ್ಕೂ ಹೆಚ್ಚು ಕಡೆಗಳಲ್ಲಿ ಎಸ್‌ಐಟಿ ತಂಡವು ಕಳೆದ ಒಂದು ತಿಂಗಳಿಂದ ಹುಡುಕಾಟ ನಡೆಸಿತು. ಕಳೆದ ಒಂದು ವಾರದಿಂದ ಸಾಕ್ಷಿದಾರರನ್ನು ವಿಚಾರಣೆ ನಡೆಸುತ್ತಿದೆ. ಶನಿವಾರ ಬೆಳಗಿನ ಜಾವದವರೆಗೂ ವಿಚಾರಣೆ ನಡೆಸಿ ಬಳಿಕ ಬಂಧಿಸುವ ನಿರ್ಧಾರಕ್ಕೆ ಬಂದಿದೆ.

ದೂರುದಾರ ಹೇಳಿದ ಪ್ರಕರಣ ಸಂಪೂರ್ಣ ಸುಳ್ಳು ಎಂದು ತನಿಖೆಯಿಂದ ಬೆಳಕಿಗೆ ಬಂದ ಕಾರಣ ಅಂತಿಮವಾಗಿ ‌ದೂರುದಾರನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ ಎನ್ನಲಾಗಿದೆ.

Ramesh Babu

Journalist

Recent Posts

ಬಿರುಗಾಳಿ ಸಹಿತ ಜೋರು ಮಳೆ: ಧರೆಗುರುಳಿದ 2 ಟ್ರಾನ್ಸ್‌ಫಾರ್ಮರ್ (ವಿದ್ಯುತ್ ಪರಿವರ್ತಕ), 9 ವಿದ್ಯುತ್ ಕಂಬಗಳು: ತಪ್ಪಿದ ಭಾರೀ ಅನಾಹುತ

ಇಂದು ಸಂಜೆ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಜೋರು ಮಳೆಯಾಗಿದ್ದು, ಭಾರೀ ಮಳೆ ಅವಾಂತರದಿಂದಾಗಿ ಕೆಲವೆಡೆ ಅನಾಹುತಗಳು ಸಂಭವಿಸಿವೆ... ದೊಡ್ಡಬಳ್ಳಾಪುರ ತಾಲೂಕಿನ…

6 hours ago

ಕುಡಿಯುವ ನೀರು ಸಮಸ್ಯೆಗೆ ಸಹಾಯವಾಣಿ ಆರಂಭ

ಬೇಸಿಗೆ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರಿನ…

9 hours ago

35 ಸಾವಿರ ಲಂಚದ ಹಣ ಬಿಸಾಕಿ ಎಸ್ಕೇಪ್ – ಕೊನೆಗೂ ಲೋಕಾಯುಕ್ತ ಬಲೆಗೆ ಬಿದ್ದ ಸಹಾಯಕ ಡ್ರಗ್ ಕಂಟ್ರೋಲರ್.!

ಲೋಕಾಯುಕ್ತ ಅಧಿಕಾರಿಗಳನ್ನು ಕಂಡು ಲಂಚದ ಹಣ ಬಿಸಾಡಿ ಪರಾರಿಯಾಗಿದ್ದ ಎಫ್‌‌ಡಿಸಿ ಶ್ಯಾಮಲಾ ಹಾಗೂ ಇಬ್ಬರು ಸಹಾಯಕರು ಕೊನೆಗೂ‌ ಲೋಕಾಯುಕ್ತ ಬಲೆಗೆ…

9 hours ago

ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್…

12 hours ago

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

15 hours ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

18 hours ago