ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣ: ತನಿಖೆಗೆ SIT ರಚಿಸಿ ಸಿಎಂ ಸಿದ್ದರಾಮಯ್ಯ ಆದೇಶ

ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ‌ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಪ್ರಜ್ವಲ್ ರೇವಣ್ಣ ಕೇಸ್: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ಜೀವನ‌ಪರ್ಯಂತ ಸೆರೆಮನೆ ವಾಸ

ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ದೋಷಿ ಎಂದು…

2 hours ago

ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ

ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…

11 hours ago

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

21 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

23 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

1 day ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

1 day ago