ಧರ್ಮಸ್ಥಳ ಭಾಗದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ವ್ಯಕ್ತಿಯೊಬ್ಬರು ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲಿಸಿದ್ದಾರೆ, ಸ್ಥಳೀಯ ಹಾಗೂ ರಾಷ್ಟ್ರೀಯ ಮಾಧ್ಯಮಗಳು ಮನುಷ್ಯನ ತಲೆಬರುಡೆ ದೊರಕಿದ ಸ್ಥಳ ಹಾಗೂ ನಾಪತ್ತೆಯಾದ ವೈದ್ಯಕೀಯ ವಿದ್ಯಾರ್ಥಿನಿಯ ಕುಟುಂಬದವರ ಹೇಳಿಕೆಯನ್ನು ಪ್ರಸಾರ ಮಾಡಿವೆ. ಈ ಪ್ರದೇಶದಲ್ಲಿ ಅಸಹಜ ಸಾವುಗಳು, ಕೊಲೆ, ಅತ್ಯಾಚಾರ ಹೀಗೆ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳು ನಡೆದಿರಬಹುದಾಗಿದ್ದು, ಈ ಎಲ್ಲಾ ಸಾಧ್ಯತೆಗಳನ್ನು ಪರಿಗಣಿಸಿ ಪ್ರಕರಣದ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗವು ರಾಜ್ಯ ಸರ್ಕಾರಕ್ಕೆ ಕೋರಿದ್ದು, ಅವರ ಕೋರಿಕೆಯ ಮೇರೆಗೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ಆದೇಶಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಶೇಷ ತನಿಖಾ ತಂಡವು ಧರ್ಮಸ್ಥಳ ಠಾಣೆಯಲ್ಲಿ ದಾಖಲಾಗಿರುವ ದೂರು ಸೇರಿದಂತೆ ಇದಕ್ಕೆ ಸಂಬಂಧಪಟ್ಟಂತೆ ರಾಜ್ಯದ ಇತರೆ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ದಾಖಲಾಗುವ ಎಲ್ಲಾ ಕ್ರಿಮಿನಲ್ ಪ್ರಕರಣಗಳನ್ನು ಸಮಗ್ರ ತನಿಖೆ ನಡೆಸಿ, ವರದಿ ನೀಡಲಿದೆ ಎಂದು ತಿಳಿಸಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…