ನಂದಿನಿ ಶೀತಲಿಕರಣ ಘಟಕದಲ್ಲಿ ದುರ್ಘಟನೆ: ಮರದಿಂದ ಬಿದ್ದು ಯುವಕ ಸಾವು, ನ್ಯಾಯಕ್ಕಾಗಿ ಕುಟುಂಬಸ್ಥರ ಪ್ರತಿಭಟನೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದ ಬಳಿಯ ನಂದಿನಿ ಹಾಲಿನ ಶೀತಲಿಕರಣ ಘಟಕದ ಆವರಣದಲ್ಲಿ ನಡೆದ ದುರ್ಘಟನೆಯಲ್ಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಧರ್ಮಪುರ ಗ್ರಾಮದ ನರಸಿಂಹಮೂರ್ತಿ (28) ಮೃತ ದುರ್ದೈವಿ. ಅವರು ಶೀತಲಿಕರಣ ಘಟಕದಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲಸದ ವೇಳೆಯಲ್ಲಿ ಘಟಕದ ಆವರಣದಲ್ಲಿದ್ದ ನೇರಳೆ ಮರ ಹತ್ತಿದ್ದ ವೇಳೆ ಕಾಲು ಜಾರಿ ಕೆಳಗೆ ಬಿದ್ದಿದ್ದರು ಎನ್ನಲಾಗಿದೆ.

ಗಂಭೀರವಾಗಿ ಗಾಯಗೊಂಡ ನರಸಿಂಹಮೂರ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಯುವಕನ ಸಾವಿನ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಶೀತಲಿಕರಣ ಘಟಕದ ಆವರಣದಲ್ಲಿ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು. ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಉದ್ಯೋಗ ನೀಡಬೇಕು ಹಾಗೂ ಮಕ್ಕಳ ಭವಿಷ್ಯಕ್ಕೆ ಅನುಕೂಲವಾಗುವ ರೀತಿಯಲ್ಲಿ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಘಟನಾ ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

10 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

15 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

18 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

1 day ago