ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂ.ಗೆ ಏರಿಕೆ ಮಾಡುವಂತೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.