Categories: ರಾಜ್ಯ

ನಂದಿನಿ ಹಾಲಿನ‌ ದರ ಏರಿಕೆಗೆ‌ ಸರ್ಕಾರ ಅನುಮತಿ: ಪ್ರತಿ‌ ಲೀ.3 ರೂ. ಏರಿಕೆ: ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿ

ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂ.ಗೆ ಏರಿಕೆ ಮಾಡುವಂತೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಕೆಎಂಎಫ್ ಪ್ರತಿ ಲೀಟರ್ ಗೆ 5 ರೂಪಾಯಿ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಹೆಚ್ಚಳವಾದ 3 ರೂಪಾಯಿ ಹಾಲು ಉತ್ಪಾದಕರಿಗೆ ಹೋಗಬೇಕು ಎಂದು ಸಿಎಂ ಸೂಚಿಸಿದ್ದಾರೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

9 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

15 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

19 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

20 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago