ನಕಲಿ ಅಂಕಪಟ್ಟಿ ಸೃಷ್ಟಿಸಿ ಅಂಚೆ ಇಲಾಖೆಯಲ್ಲಿ ನೌಕರಿ ಪಡೆದು ಸರಕಾರಕ್ಕೆ ವಂಚಿಸಿದ್ದ ಅಪರಾಧಕ್ಕಾಗಿ ವ್ಯಕ್ತಿಯೊಬ್ಬನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿ ಮಡಿಕೇರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.
ಕಾರೆಕಾಡು ಗ್ರಾಮದ ಎಂ.ಬಿ. ಸಂದೇಶ (32) ಎಂಬಾತ ಅಂಚೆ ಇಲಾಖೆಯಲ್ಲಿ 2019ನೇ ಸಾಲಿನಲ್ಲಿ ನಡೆದ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಯ ನೇಮಕಾತಿಯಲ್ಲಿ ಆನ್ ಲೈನ್ ಮುಖಾಂತರ ಅರ್ಜಿಯೊಂದಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ನಕಲಿ ಅಂಕಪಟ್ಟಿಯನ್ನು ಸಲ್ಲಿಸಿರುವುದು ಪರಿಶೀಲನೆ ವೇಳೆ ಕಂಡುಬಂದಿತ್ತು.
ಹೀಗಾಗಿ ಈತನ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಈತನನ್ನು 2022ರ ಫೆ. 25 ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಪ್ರಕರಣದ ತನಿಖಾಧಿಕಾರಿ ಪಿಎಸ್ ಐ ಶ್ರೀನಿವಾಸ್ ಮತ್ತು ಸಹಾಯಕ ತನಿಖಾಧಿಕಾರಿ ಹೆಚ್.ಸಿ. ದಿವ್ಯಾ ಅವರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮಡಿಕೇರಿಯ ಸಿವಿಲ್ ಜಡ್ಜ್ ಮತ್ತು ಸಿಜೆಎಂ ನ್ಯಾಯಾಲಯದ ನ್ಯಾಯಧೀಶರಾದ ಜಯಲಕ್ಷ್ಮಿ ಅವರು ಆರೋಪ ಸಾಬೀತಾದ ಹಿನ್ನೆಲೆ ಆರೋಪಿ ಸಂದೇಶನಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1.25 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರಿ ಅಭಿಯೋಜಕರಾದ ಬಿ.ಎಸ್. ಸಂತೋಷ್ ಅವರು ಸರಕಾರದ ಪರ ವಾದ ಮಂಡಿಸಿದ್ದರು.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜಿನಲ್ಲಿ ಯಾವ ಲೋಪಗಳು ಉಂಟಾಗದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳುವ ಸಲುವಾಗಿ ರಾಜ್ಯದ ಎಲ್ಲ…
ಗರ್ಭಕಂಠ ಕ್ಯಾನ್ಸರ್ ಬಾರದಂತೆ ತಡೆಯುವಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್.ಪಿ.ವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು 14 ರಿಂದ 15 ವರ್ಷದೊಳಗಿನ…
ಕೃಷಿ ಹೊಂಡದಲ್ಲಿ ಈಜಲು ಹೋಗಿ 34ವರ್ಷದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಲಿಂಗಾಪುರ ಗ್ರಾಮದಲ್ಲಿ ಇಂದು…
ಮಾ.9ರ ಗುರುವಾರ ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ…
ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ…
ಭಾವ ಬಯಲಿನ ಅಕ್ಕ......... ಹಸಿವಾದಡೆ ಊರೊಳಗೆ ಭಿಕ್ಷಾನ್ನಗಳುಂಟು. ತೃಷೆಯಾದಡೆ ಕೆರೆ ಹಳ್ಳ ಬಾವಿಗಳುಂಟು. ಅಂಗಶೀತಕ್ಕೆ ಬೀಸಾಟ ಅರಿವೆಗಳುಂಟು. ಶಯನಕ್ಕೆ ಹಾಳು…