ನಕಲಿ ದಾಖಲೆ ಸೃಷ್ಟಿಸಿ ದಲಿತರ ಜಾಗ ಕಬಳಿಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಡಿಎಸ್ ಎಸ್ ಧರಣಿ

ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು ಅವರಿಗೆ ಹಣದ ಆಮಿಷ ಒಡ್ಡಿ ನಕಲಿ ದಾಖಲೆ ಸೃಷ್ಟಿ ಮಾಡಿರುತ್ತಾರೆ, ಹಾಗೂ ನಕಲಿ ದಾಖಲೆಯ ಮೇಲೆ ಸದರಿ ಜಾಗಕ್ಕೆ ಅತಿಕ್ರಮ ಪ್ರವೇಶ ಮಾಡಿರುತ್ತಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಬಸವರಾಜ್ ಆರೋಪಿಸಿದರು.

ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಬೂಚನಹಳ್ಳಿ ಗ್ರಾಮದ ಗ್ರಾಮ ಠಾಣಾ ಸ.132/116ರ ಪೈಕಿ 2 ಎಕರೆ 20 ಗುಂಟೆ ಜಾಗವನ್ನು ಅಕ್ರಮವಾಗಿ ನಕಲಿ ದಾಖಲೆ ಸೃಷ್ಟಿಸಿಕೊಂಡು ಭೂ ಕಬಳಿಕೆ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರ ಪತಿ ರುದ್ರಮೂರ್ತಿ ಹಾಗೂ ಬೋಗಸ್ ಇ ಖಾತಾ ಮಾಡಿಕೊಡಲಾಗಿದೆ ಎಂಬ ಆರೋಪದ ಮೇಲೆ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಿಡಿಒ ಮುನಿರಾಜು ವಿರುದ್ಧ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಹಾಗೂ ಸ್ಥಳೀಯ ಗ್ರಾಮಸ್ಥರ ಸಹಯೋಗದೊಂದಿಗೆ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ಎದುರು ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಒಳಗೊಂಡಂತೆ ಪಿಡಿಒ ಮುನಿರಾಜು ವಿರುದ್ಧ ತನಿಖೆ ಕೈಗೊಂಡು ಕಾನೂನು ರೀತಿಯ ಕ್ರಮ ಕೈಗೊಳ್ಳಲು ಕೋರಿ ತಾಲ್ಲೂಕು ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿಗಾಗಿ ಮಂಜೂರಾಗಿದ್ದ ಹಲವು ಅನುದಾನಗಳನ್ನು ದುರ್ಬಳಕೆ ಮಾಡಲಾಗಿದೆ. ಸಕ್ಕರೆ ಗೊಲ್ಲಹಳ್ಳಿ ಗ್ರಾಮದ ಪರಿಶಿಷ್ಠ ಕಾಲೋನಿಯಲ್ಲಿ ಒಳಚರಂಡಿ ಕಾಮಗಾರಿ ಕಳಪೆ ಮಾಡಲಾಗಿದ್ದು, ಕೂಡಲೇ ಗುಣಮಟ್ಟ ಪರಿಶೀಲನೆ ಆಗಬೇಕಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಕಾಳೇನಹಳ್ಳಿ ಕೆರೆಯಲ್ಲಿ ಮಣ್ಣು ಮಾರಾಟ ಮಾಡಲಾಗುತ್ತಿದೆ ಕೂಡಲೇ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ತನಿಖೆ ಕೈಗೊಂಡು ತಪ್ಪು ಮಾಡಿದವರಿಗೆ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಬಸವರಾಜು, ನೆಲಮಂಗಲ ತಾಲ್ಲೂಕು ಸಂಚಾಲಕರಾದ ಬರದಿ ಹನುಮಂತರಾಯಪ್ಪ, ಜಿಲ್ಲಾ ಸಂಚಾಲಕರಾದ ದೊಡ್ಡಯ್ಯ ಲಿಂಗಪುರ, ಜಿಲ್ಲಾ ಸಂಘಟನಾ ಸಂಚಾಲಕರಾದ ನರೇಂದ್ರ ಮೂರ್ತಿ ಮಾಡೇಶ್ವರ, ಆನಂದ್ ಸಕ್ಕರೆಗೊಲ್ಲಹಳ್ಳಿ, ಹನುಮಂತಯ್ಯ, ಹನುಮಯ್ಯ, ರಾಮು ನೇರಳೆಘಟ್ಟ , ಮಹಿಳಾ ಸಂಚಾಲಕರಾದ ಕಮಲಮ್ಮ, ನಾಗರತ್ನಮ್ಮ, ಸರಸ್ವತಿ, ರತ್ನಮ್ಮ , ಚಲವಾದಿ ಮಹಾಸಭಾ ಅಧ್ಯಕ್ಷರಾದ ಉದಯಶಂಕರ್,  ಎಲ್.ಎನ್ .ಮೂರ್ತಿ ಹಾಗೂ ಸ್ಥಳಿಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

2 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

3 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

3 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

3 hours ago

10.50 ಕೋಟಿ ಸಾಲ ವಂಚನೆ ಆರೋಪ: ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಸೊಸೈಟಿ ಅಧ್ಯಕ್ಷನ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಸೂಕ್ತ ದಾಖಲೆಗಳನ್ನು ಪರಿಶೀಲಿಸದೆ 10.50 ಕೋಟಿ ಸಾಲ ಮಂಜೂರು ಮಾಡಿ ಸೌಂದರ್ಯ ಸೌಹಾರ್ದ ಕ್ರೆಡಿಟ್‌ ಕೋ-ಆಪರೇಟಿವ್‌ ಸೊಸೈಟಿಗೆ ಆರ್ಥಿಕ…

6 hours ago

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ಮಾಕಳಿ ರೈಲ್ವೆ ನಿಲ್ದಾಣದ ಸಮೀಪ ಹಿಂದೂಪುರ–ಯಲಹಂಕ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್…

14 hours ago