ಕೋಲಾರ: ಮೂರು ತಿಂಗಳಿಂದ ಮಕ್ಕಳಿಗೆ ಬಾದಿಸುತ್ತಿರುವ ವೈರಲ್ ಪೀವರ್ ನಿಯಂತ್ರಣಕ್ಕೆ ವಿಶೇಷ ವೈದ್ಯರ ತಂಡ ರಚನೆ ಮಾಡಿ ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಜೊತೆ ಚಲ್ಲಾಟವಾಡುವ ನಕಲಿ ಡಾಕ್ಟರ್‌ಗಳ ವಿರುದ್ಧ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿ, ಗಡಿಪಾರು ಮಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ರೈತ ಸಂಘದಿಂದ ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.
ಮನವಿ ನೀಡಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, 3 ತಿಂಗಳಿಂದ ಮಕ್ಕಳಿಗೆ ಬಾಧಿಸುತ್ತಿರುವ ಕೆಮ್ಮು, ನೆಗಡಿ, ಕಪ, ನಿಯಂತ್ರಣಕ್ಕೆ ಭಾರದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಸಿಗದೆ ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಹಣ ನೀಡಲಾಗದೆ ಅತಂತ್ರ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು, ವೈದ್ಯಕೀಯ ಗಂದ ಗಾಳಿ ಗೊತ್ತಿಲ್ಲದ ನಕಲಿ ವೈದ್ಯರಿಂದ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಗಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗಡಿಭಾಗಗಳಲ್ಲಿ ಬಡವರ ರಕ್ತ ಇರುವ ನಕಲಿ ಕ್ಲೀನಿಕ್‌ಗಳು ನಾಯಿಕೊಡೆಗಳಂತೆ ತಲೆಎತ್ತಿದ್ದು, ಅಮಾಯಕರ ಜನರ ಜೀವನ ಜೊತೆ ಚಲ್ಲಾಟವಾಡುತ್ತಿದ್ದರೂ, ಜಿಲ್ಲಾದ್ಯಂತ ೨೮೦ ನಕಲಿ ಕ್ಲೀನಿಕ್‌ಗಳಿದ್ದು, ಅಂಕಿ ಅಂಶಗಳ ಪ್ರಕಾರ ಸಂಬಂಧಪಟ್ಟ ಅಧಿಕಾರಿಗಳ ಬಳಿ ದಾಖಲೆಗಳ ಸಮೇತ ಇದ್ದರೂ ಸಹ ಕ್ಲೀನಿಕ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮೀನಾಮೇಷ ಎಣಿಸುತ್ತಿರುವುದು ನೋಡಿದರೆ, ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಅಡಇಟ್ಟಂತೆ ನಕಲಿ ಕ್ಲೀನಿಕ್‌ಗಳಿಗೆ ತಮ್ಮ ಅಧಿಕಾರವನ್ನು ಅಡ ಇಟ್ಟು, ಬಡವರ ಪ್ರಾಣವನ್ನು ಲೆಕ್ಕಿಸದ ಅಧಿಕಾರಿಗಳ ಬೇಜವಾಬ್ದಾರಿ ಎದ್ದುಕಾಣಿಸುತ್ತಿದೆ ಎಂದು ಆರೋಪ ಮಾಡಿದರು.
ಒಂದು ಕಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳ ಬಳಿ ಹಣ ಹಣ ಎಂದು ಬಾಯಿ ಬಿಡುವ ಸಿಬ್ಬಂದಿ ಆರೋಗ್ಯ ಕಾಪಾಡಿಕೊಳ್ಳಲು ಅರಸಾಹಸ ಪಡುವ ರೋಗಿಗಳು ಇವರ ಮದ್ಯೆ ಮೌನವಾಗಿರುವ ಅಧಿಕಾರಿಗಳಿಗೆ ಇಡೀ ಶಾಪವಾಕುತ್ತಿದ್ದರೂ, ನಾಚಿಕೆ ಇಲ್ಲದ ಅಧಿಕಾರಿಗಳ, ಕಾರ್ಯವೈಖರಿ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದರು.
ರಾಜು ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳನ್ನು ಸಭೆ ಕರೆದು, ಅಡಿಯಿಂದ ಮುಡಿಯವರೆಗೂ ಹಣ ಹಣ ಎಂದು ಬಾಯಿಬಡೆದುಕೊಳ್ಳುವ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಕಡಿವಾಣ ಹಾಕಬೇಕು. ನಾಯಿಕೊಡೆಗಳಂತೆ ತಲೆಎತ್ತಿರುವ ನಕಲಿ ಕ್ಲೀನಿಕ್‌ಗಳಿಗೆ ನಿಯಂತ್ರಿಸಬೆಕು. ಲಂಗುಲಗಾಮು ಇಲ್ಲದೆ, ಹಣ ಕೀಳುವ ಖಾಸಗಿ ಕ್ಲೀನಿಕ್‌ಗಳಿಗೆ ಮತ್ತಿತರ ಆರೋಗ್ಯ ಸಂಬಂಧಪಟ್ಟ ಕ್ಲೀನಿಕ್‌ಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.
ಆರೋಗ್ಯ ರಕ್ಷಣೆಗಾಗಿ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಜೊತೆಗೆ ಪ್ರತಿ ಹಳ್ಳಿಗೂ ವೈದ್ಯರು ಬೇಟಿ ನೀಡಿ ಹಳ್ಳಿಗಳಲ್ಲಿಯೇ ಚಿಕಿತ್ಸೆ ನೀಡುವ ಅನುಕೂಲ ಮಾಡಿಕೊಟ್ಟು ಬರದಿಂದ ತತ್ತರಿಸಿರುವ ಗ್ರಾಮೀಣ ಪ್ರದೇಶದ ರೈತ ಕೂಲಿ ಕಾರ್ಮಿಕರ ಆರೋಗ್ಯವನ್ನು ರಕ್ಷಣೆ ಮಾಡಬೇಕೆಂದು ಮನವಿ ನೀಡಿ ಒತ್ತಾಯಿಸಲಾಯಿತು.
ಮನವಿ ಸ್ವೀಕರಿಸಿದ ಆರೋಗ್ಯ ಅಧಿಕಾರಿ ಶ್ರೀನಿವಾಸ್ ರವರು ಹವಾಮಾವ ವೈಪರಿತ್ಯದಿಂದ ಮಕ್ಕಳಲ್ಲಿ ಜ್ವರ, ಕೆಮ್ಮು, ಕಾಣಿಸಿಕೊಳ್ಳುತ್ತಿದೆ ಸರ್ಕಾರಿ ಆಸ್ಪತ್ರೆಗಳಲ್ಲಿ ೨೪ ಘಂಟೆ ಚಿಕಿತ್ಸೆ ನೀಡಲು ಆದೇಶ ಮಾಡಲಾಗಿದೆ. ಜೊತೆಗೆ ಜಿಲ್ಲಾದ್ಯಂತ 280 ನಕಲಿ ಕ್ಲೀನಿಕ್‌ಗಳು ಇದ್ದು, ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅನುಮತಿ ಪಡೆದು, ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಮನವಿ ನೀಡುವಾಗ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಯಲ್ಲಪ್ಪ, ಹರೀಶ್, ಸುಪ್ರೀಂ ಚಲ, ವಿನೋದ್, ಶಿವಾರೆಡ್ಡಿ, ಪಾರುಕ್ ಪಾಷ, ರಾಜೇಶ್, ಗೀರೀಶ್, ರಾಧ, ಶೈಲಜ, ಶೋಭ, ನಾಗರತ್ನ, ಮುಂತಾದವರಿದ್ದರು.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…