Categories: ಕೋಲಾರ

ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ರೈತ ಸಂಘ ಮನವಿ

ಕೋಲಾರ: ಮೂರು ತಿಂಗಳಿಂದ ಮಕ್ಕಳಿಗೆ ಬಾದಿಸುತ್ತಿರುವ ವೈರಲ್ ಪೀವರ್ ನಿಯಂತ್ರಣಕ್ಕೆ ವಿಶೇಷ ವೈದ್ಯರ ತಂಡ ರಚನೆ ಮಾಡಿ ಗ್ರಾಮೀಣ ಪ್ರದೇಶದ ಬಡವರ ಆರೋಗ್ಯ ಜೊತೆ ಚಲ್ಲಾಟವಾಡುವ ನಕಲಿ ಡಾಕ್ಟರ್‌ಗಳ ವಿರುದ್ಧ ಗೂಂಡಾ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿ, ಗಡಿಪಾರು ಮಾಡಿ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ರೈತ ಸಂಘದಿಂದ ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್ ರವರಿಗೆ ಮನವಿ ನೀಡಿ ಆಗ್ರಹಿಸಲಾಯಿತು.

ಮನವಿ ನೀಡಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, 3 ತಿಂಗಳಿಂದ ಮಕ್ಕಳಿಗೆ ಬಾಧಿಸುತ್ತಿರುವ ಕೆಮ್ಮು, ನೆಗಡಿ, ಕಪ, ನಿಯಂತ್ರಣಕ್ಕೆ ಭಾರದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಸಿಗದೆ ಖಾಸಗಿ ಆಸ್ಪತ್ರೆಗಳಿಗೆ ದುಬಾರಿ ಹಣ ನೀಡಲಾಗದೆ ಅತಂತ್ರ ಪರಿಸ್ಥಿತಿಯಲ್ಲಿ ಮಕ್ಕಳ ಆರೋಗ್ಯ ರಕ್ಷಣೆ ಮಾಡಿಕೊಳ್ಳಲು ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು, ವೈದ್ಯಕೀಯ ಗಂದ ಗಾಳಿ ಗೊತ್ತಿಲ್ಲದ ನಕಲಿ ವೈದ್ಯರಿಂದ ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಇದ್ದರೂ ಸಮಸ್ಯೆಯನ್ನು ಗಂಭೀರವಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಪರಿಗಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಗಡಿಭಾಗಗಳಲ್ಲಿ ಬಡವರ ರಕ್ತ ಇರುವ ನಕಲಿ ಕ್ಲೀನಿಕ್‌ಗಳು ನಾಯಿಕೊಡೆಗಳಂತೆ ತಲೆಎತ್ತಿದ್ದು, ಅಮಾಯಕರ ಜನರ ಜೀವನ ಜೊತೆ ಚಲ್ಲಾಟವಾಡುತ್ತಿದ್ದರೂ, ಜಿಲ್ಲಾದ್ಯಂತ ೨೮೦ ನಕಲಿ ಕ್ಲೀನಿಕ್‌ಗಳಿದ್ದು, ಅಂಕಿ ಅಂಶಗಳ ಪ್ರಕಾರ ಸಂಬಂಧಪಟ್ಟ ಅಧಿಕಾರಿಗಳ ಬಳಿ ದಾಖಲೆಗಳ ಸಮೇತ ಇದ್ದರೂ ಸಹ ಕ್ಲೀನಿಕ್‌ಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮೀನಾಮೇಷ ಎಣಿಸುತ್ತಿರುವುದು ನೋಡಿದರೆ, ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಅಡಇಟ್ಟಂತೆ ನಕಲಿ ಕ್ಲೀನಿಕ್‌ಗಳಿಗೆ ತಮ್ಮ ಅಧಿಕಾರವನ್ನು ಅಡ ಇಟ್ಟು, ಬಡವರ ಪ್ರಾಣವನ್ನು ಲೆಕ್ಕಿಸದ ಅಧಿಕಾರಿಗಳ ಬೇಜವಾಬ್ದಾರಿ ಎದ್ದುಕಾಣಿಸುತ್ತಿದೆ ಎಂದು ಆರೋಪ ಮಾಡಿದರು.

ಒಂದು ಕಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳ ಬಳಿ ಹಣ ಹಣ ಎಂದು ಬಾಯಿ ಬಿಡುವ ಸಿಬ್ಬಂದಿ ಆರೋಗ್ಯ ಕಾಪಾಡಿಕೊಳ್ಳಲು ಅರಸಾಹಸ ಪಡುವ ರೋಗಿಗಳು ಇವರ ಮದ್ಯೆ ಮೌನವಾಗಿರುವ ಅಧಿಕಾರಿಗಳಿಗೆ ಇಡೀ ಶಾಪವಾಕುತ್ತಿದ್ದರೂ, ನಾಚಿಕೆ ಇಲ್ಲದ ಅಧಿಕಾರಿಗಳ, ಕಾರ್ಯವೈಖರಿ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದರು.

ರಾಜು ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳನ್ನು ಸಭೆ ಕರೆದು, ಅಡಿಯಿಂದ ಮುಡಿಯವರೆಗೂ ಹಣ ಹಣ ಎಂದು ಬಾಯಿಬಡೆದುಕೊಳ್ಳುವ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಕಡಿವಾಣ ಹಾಕಬೇಕು. ನಾಯಿಕೊಡೆಗಳಂತೆ ತಲೆಎತ್ತಿರುವ ನಕಲಿ ಕ್ಲೀನಿಕ್‌ಗಳಿಗೆ ನಿಯಂತ್ರಿಸಬೆಕು. ಲಂಗುಲಗಾಮು ಇಲ್ಲದೆ, ಹಣ ಕೀಳುವ ಖಾಸಗಿ ಕ್ಲೀನಿಕ್‌ಗಳಿಗೆ ಮತ್ತಿತರ ಆರೋಗ್ಯ ಸಂಬಂಧಪಟ್ಟ ಕ್ಲೀನಿಕ್‌ಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ಆರೋಗ್ಯ ರಕ್ಷಣೆಗಾಗಿ ತುಂಬಿ ತುಳುಕುತ್ತಿರುವ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಜೊತೆಗೆ ಪ್ರತಿ ಹಳ್ಳಿಗೂ ವೈದ್ಯರು ಬೇಟಿ ನೀಡಿ ಹಳ್ಳಿಗಳಲ್ಲಿಯೇ ಚಿಕಿತ್ಸೆ ನೀಡುವ ಅನುಕೂಲ ಮಾಡಿಕೊಟ್ಟು ಬರದಿಂದ ತತ್ತರಿಸಿರುವ ಗ್ರಾಮೀಣ ಪ್ರದೇಶದ ರೈತ ಕೂಲಿ ಕಾರ್ಮಿಕರ ಆರೋಗ್ಯವನ್ನು ರಕ್ಷಣೆ ಮಾಡಬೇಕೆಂದು ಮನವಿ ನೀಡಿ ಒತ್ತಾಯಿಸಲಾಯಿತು.

ಮನವಿ ಸ್ವೀಕರಿಸಿದ ಆರೋಗ್ಯ ಅಧಿಕಾರಿ ಶ್ರೀನಿವಾಸ್ ರವರು ಹವಾಮಾವ ವೈಪರಿತ್ಯದಿಂದ ಮಕ್ಕಳಲ್ಲಿ ಜ್ವರ, ಕೆಮ್ಮು, ಕಾಣಿಸಿಕೊಳ್ಳುತ್ತಿದೆ ಸರ್ಕಾರಿ ಆಸ್ಪತ್ರೆಗಳಲ್ಲಿ ೨೪ ಘಂಟೆ ಚಿಕಿತ್ಸೆ ನೀಡಲು ಆದೇಶ ಮಾಡಲಾಗಿದೆ. ಜೊತೆಗೆ ಜಿಲ್ಲಾದ್ಯಂತ 280 ನಕಲಿ ಕ್ಲೀನಿಕ್‌ಗಳು ಇದ್ದು, ಅದನ್ನು ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಅನುಮತಿ ಪಡೆದು, ಕಾನೂನು ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಮನವಿ ನೀಡುವಾಗ ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಯಲ್ಲಪ್ಪ, ಹರೀಶ್, ಸುಪ್ರೀಂ ಚಲ, ವಿನೋದ್, ಶಿವಾರೆಡ್ಡಿ, ಪಾರುಕ್ ಪಾಷ, ರಾಜೇಶ್, ಗೀರೀಶ್, ರಾಧ, ಶೈಲಜ, ಶೋಭ, ನಾಗರತ್ನ, ಮುಂತಾದವರಿದ್ದರು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

17 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago