ನಕಾಶೆ ರಸ್ತೆಯನ್ನು ತೆರವು ಮಾಡಿ ರೈತರಿಗೆ ಅನುಕೂಲ ಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು

ದೊಡ್ಡಬಳ್ಳಾಪುರ ತಾಲೂಕಿನ ಮಾಚಗೊಂಡಹಳ್ಳಿಯಿಂದ ಹೆಗ್ಗಡೆಹಳ್ಳಿ ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನ ತೆರವುಗೊಳಿಸಿ ರೈತರಿಗೆ ಅನುವುಮಾಡಿಕೊಟ್ಟ ಕಂದಾಯ ಇಲಾಖಾಧಿಕಾರಿಗಳು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಶಿವಣ್ಣ, ಅನಾದಿಕಾಲದಿಂದಲೂ ಇದ್ದ ನಕಾಶೆ ರಸ್ತೆಯನ್ನು ಕೆಲ ರೈತರು ಒತ್ತುವರಿ ಮಾಡಿಕೊಂಡಿದ್ದರು. ಇದರಿಂದ ರೈತರು ತಮ್ಮ  ಹೊಲಗಳಿಗೆ ಹೋಗಲು ರಸ್ತೆ ಇಲ್ಲದೆ ತಮ್ಮ ತೋಟ, ಹೊಲಗಳಲ್ಲಿ ಬೆಳೆದ ಬೆಳೆಯನ್ನು ಸಾಗಿಸಲು ಪರದಾಡುವಂತಾಗಿತ್ತು. ಕಳೆದ ಹಲವು ದಿನಗಳಿಂದ ನಕಾಶೆ ರಸ್ತೆಯನ್ನು ತೆರವುಗೊಳಿಸಲು ಊರಿನ ಗ್ರಾಮಸ್ಥರು, ಕರ್ನಾಟಕ ರಾಜ್ಯ ರೈತ ಸಂಘ, ಪ್ರಜಾ ವಿಮೋಚನಾ ಸಮಿತಿ ‌ನೇತೃತ್ವದಲ್ಲಿ ಅಧಿಕಾರಿಗಳನ್ನು ಸಂಪರ್ಕಿಸಿದ ಪರಿಣಾಮವಾಗಿ ಇಂದು ಒತ್ತುವರಿ ಮಾಡಿದ್ದ‌ ರಸ್ತೆಯನ್ನು ಎಲ್ಲರ ಒಮ್ಮತದಿಂದ ಅಧಿಕಾರಿಗಳು ತೆರವುಗೊಳಿಸುವಲ್ಲಿ ಯಶಸ್ವಿಯಾದರು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ‌ಹನುಮೇಗೌಡ ಮಾತನಾಡಿ, ಎರಡು ಊರುಗಳನ್ನು ಸಂಪರ್ಕಿಸುತ್ತಿದ್ದ ನಕಾಶೆ ರಸ್ತೆಯನ್ನು ಒತ್ತುವರಿ ಮಾಡಿದ್ದರಿಂದ ರೈತರಿಗೆ ಅನಾನುಕೂಲವಾಗಿತ್ತು. ಇದನ್ನು ಮನಗಂಡು ಒತ್ತುವರಿ ಮಾಡಿಕೊಂಡಿದ್ದ ರಸ್ತೆಯನ್ನು ತೆರವುಗೊಳಿಸುವಂತೆ ಸಂಬಂದಿಸಿದ ಇಲಾಖೆಗಳಿಗೆ ಅರ್ಜಿ ಸಲ್ಲಿಸಲಾಗಿತ್ತು. ಈ ಹಿನ್ನೆಲೆ ಇಂದು ಕಂದಾಯ ಇಲಾಖೆ ಅಧಿಕಾರಿಗಳು, ರೈತರ ಸಮ್ಮುಖದಲ್ಲಿ ಒತ್ತುವರಿ ತೆರವುಗೊಳಿಸಲಾಯಿತು. ಇದರಿಂದ ರೈತರಿಗೆ ತುಂಬಾ ಅನುಕೂಲವಾದಂತಾಗಿದೆ ಎಂದರು.

ಈ ವೇಳೆ ರೈತ ಮುಂಖಡರಾದ ಮುನಿನಾರಾಯಣಪ್ಪ, ಉಮಾ, ಚಲುವರಾಜ್, ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗುಳ್ಯ ಹನುಮಣ್ಣ, ತಾಲೂಕು ಅಧ್ಯಕ್ಷ ವಡ್ಡರಹಳ್ಳಿ ರಾಜಶೇಖರ್, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ತಾಲೂಕು ಗೌರವಾಧ್ಯಕ್ಷ ಮೈಲಾರಪ್ಪ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಒಂದೇ ದಿನ ಇಬ್ಬರು ಯುವಕರು ಆತ್ಮಹತ್ಯೆ….!

ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…

8 hours ago

ದೇವರ ಆಶೀರ್ವಾದದಿಂದಲೇ ಎರಡು ಬಾರಿ ಸಿಎಂ ಆಗಿದ್ದೇನೆ- ಸಿಎಂ ಸಿದ್ದರಾಮಯ್ಯ

ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…

8 hours ago

ತೂಬಗೆರೆಯಲ್ಲಿಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ: ಗ್ರಾಮೀಣ ಜನರ ಆರೋಗ್ಯ ಬಹಳ ಮುಖ್ಯ- ಡಾ. ಜ್ಞಾನೇಶ್ವರಿ

ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಅತ್ಯಂತ ಅವಶ್ಯಕ. ಇಂತಹ ಶಿಬಿರಗಳು ಕಾಲಕಾಲಕ್ಕೆ ಗ್ರಾಮೀಣ ಭಾಗಗಳಲ್ಲಿ ನಡೆಯುತ್ತಲೇ…

9 hours ago

ಜಾತ್ರೆಯಲ್ಲಿ ವ್ಯಕ್ತಿಯ ಭೀಕರ ಕೊಲೆ

ಜಾತ್ರೆಯೊಂದರಲ್ಲಿ ವ್ಯಕ್ತಿಯ ಭೀಕರ ಕೊಲೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಂಗನಗೌಡ ಪಾಟೀಲ್…

16 hours ago

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

17 hours ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

20 hours ago