ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ಹೆಚ್.ಇ.ಹೆಚ್.ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜು, ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜು, ಶ್ರೀ ರಾಮ ನರ್ಸಿಂಗ್ ಕಾಲೇಜು, ಅಲ್ಟ್ರಾ ಟೆಕ್ ಸಿಮೆಂಟ್ ಲಿಮಿಟೆಡ್ ಇವರುಗಳ ಸಹಯೋಗದೊಂದಿಗೆ ನಗರದ ಅಸ್ಪತ್ರೆ ಸರ್ಕಲ್ ಬಳಿ “ರಸ್ತೆ ಸುರಕ್ಷತೆಯ ಅರಿವು ಮೂಡಿಸುವ ಸಲುವಾಗಿ” ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಮಾಹಿತಿಯ ಹಸ್ತ ಪ್ರತಿಗಳನ್ನು ಬಿಡುಗಡೆ ಮಾಡಲಾಯಿತು. ನಂತರ ರಸ್ತೆ ಸುರಕ್ಷತಾ ಸಪ್ತಾಹದ ಕಾಲು ನಡಿಗೆ ಜಾಥಾಗೆ ಹಸಿರು ನಿಶಾನೆ ನೀಡಿ ಮಾತನಾಡಿದ ಪೊಲೀಸ್ ಇನ್ಸ್ಪೆಕ್ಟರ್ ಅಮರೇಶ್ ಗೌಡ, ಸಾರ್ವಜನಿಕರು ದ್ವಿಚಕ್ರ ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮಗಳನ್ನು ಪಾಲಿಸಬೇಕು. ವಾಹನ ಚಾಲನೆ ಮಾಡುವಾಗ ಮೊಬೈಲ್ ಬಳಸಬಾರದು. ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಇದರಿಂದ ಅಪಘಾತವಾಗದಂತೆ ತಡೆಯಬಹುದಾಗಿದೆ ಎಂದು ಹೇಳಿದರು.
ಜಾಥಾದಲ್ಲಿ ಶ್ರೀ ಸೂರ್ಯ ಎಜುಕೇಷನ್ ಟ್ರಸ್ಟ್ ಆಡಳಿತ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಡಾಮ ಹೆಚ್ ಜಿ ವಿಜಯಕುಮಾರ್, ಅಲ್ಟ್ರಾ ಟೆಕ್ ಸಿಮೆಂಟ್ ಲಿಮಿಟೆಡ್ ಜನರಲ್ ಮ್ಯಾನೇಜರ್ ಪಂಕಜ್ ಶರ್ಮ, ಸಹಾಯಕ ಜನರಲ್ ಮ್ಯಾನೇಜರ್ ಸಂಜೀವ್ ಕೆದಾರಿ, ಸಹಾಯಕ ವ್ಯವಸ್ಥಾಪಕರಾದ ವಿಷ್ಣು ಬಾಲ ಸ್ವಾಮಿ, ಸಂಪನ್ಮೂಲ ವ್ಯಕ್ತಿಗಳಾದ ಪುಲ್ಲಾರೆಡ್ಡಿ, ಸುಜ್ಞಾನ ದೀಪಿಕಾ, ಸಂಸ್ಥೆಯ ಮುಖ್ಯಸ್ಥರಾದ ಎಂ ಎಸ್ ಮಂಜುನಾಥ್, ಶ್ರೀ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ ಸಿ ಮಂಜುನಾಥ್, ಹೆಚ್ ಇ ಹೆಚ್ ಎಸ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಗೌ ರಾ ರಾಮಮೂರ್ತಿ, ಆಡಳಿತಾಧಿಕಾರಿ ಶಾಮನಾಸ್, ಉಪನ್ಯಾಸಕರಾದ ಎಂ ಎನ್ ಕಲ್ಪನಾ, ಉಮ್ಮೇಮುಸ್ಕಾನ್, ರೂಪ ಟಿ, ಪುನೀತ್ ಸೇರಿದಂತೆ ಬೋಧಕೇತರ ಸಿಬ್ಬಂದಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.