ದೊಡ್ಡಬಳ್ಳಾಪುರ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಪ್ರಯುಕ್ತ ಇಂದು ಶ್ರೀ ಬಸವೇಶ್ವರ ದೇವಾಲಯದಲ್ಲಿ ದೊಡ್ಡಬಳ್ಳಾಪುರ ದೇಶದ ಪೇಟೆ ವೀರಶೈವ ಸಂಘ, ಅಕ್ಕಮಹಾದೇವಿ ಮಹಿಳಾ ಸಂಘ, ಬಸವೇಶ್ವರ ಯುವಕರ ಸಂಘದ ಸಹಯೋಗದೊಂದಿಗೆ ಬಸವೇಶ್ವರ ಮೂರ್ತಿಗೆ ಬೆಳಿಗ್ಗೆ ಆರು ಗಂಟೆಗೆ ಮೂಲ ಬಸವಣ್ಣ ದೇವರಿಗೆ ಅಭಿಷೇಕ ಹಾಗೂ ಮಧ್ಯಾಹ್ನ 12 ಗಂಟೆಗೆ ಅಶ್ವಾರೂಢ ಶ್ರೀ ಬಸವೇಶ್ವರ ಉತ್ಸವಮೂರ್ತಿಗೆ ಹೂವಿನ ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು.
ದೇವಾಲಯಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವಿನಯೋಗ ಮಾಡಲಾಯಿತು. ಸಂಜೆ ಬೆಳ್ಳಿ ರಥದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.