ನಗರದಲ್ಲಿ ಅದ್ಧೂರಿಯಾಗಿ ನಡೆದ ಶ್ರೀರಾಮೋತ್ಸವ‌ ಹಾಗೂ ಶ್ರೀರಾಮ ಶೋಭಯಾತ್ರೆ

ಧಾರ್ಮಿಕ ಹಾಗೂ ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ  ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವತಿಯಿಂದ ನಗರದಲ್ಲಿ ಅದ್ಧೂರಿಯಾಗಿ ಶ್ರೀರಾಮೋತ್ಸವ‌ ಹಾಗೂ  ಬೃಹತ್ ಶ್ರೀರಾಮ ಶೋಭಯಾತ್ರೆ ನಡೆಯಿತು.ಜೂನ್ 28ರಂದು ಸಂಜೆ 4 ಗಂಟೆಗೆ ನಗರದ ಮುತ್ಯಾಲಮ್ಮ ದೇವಾಲಯದ ಬಳಿಯಿಂದ ಬೈಕ್, ಕಾರು ಸೇರಿದಂತೆ ವಿವಿಧ ವಾಹನಗಳ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ನಡೆಯಿತು. ಸಂಜೆ 7 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಜೂನ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಗೋ ಪೂಜೆ, ಮಹಾ ಸುದರ್ಶನ ಹೋಮ, ಶ್ರೀ ರಾಮ ತಾರಕ ಹೋಮ, ಗ್ರಾಮ ದೇವತೆ ಹೋಮ, ಮಧ್ಯಾಹ್ನ ಸಾವಿರಾರು ಮಹಿಳೆಯರಿಂದ ಲಲಿತ ಸಹಸ್ರನಾಮ ಮತ್ತು ಹನುಮಾನ್ ಚಾಲಿಸ್ ಸಾಮೂಹಿಕ ಪಠಣ ನಡೆಯಿತು. ಸಂಜೆ 4 ಗಂಟೆಗೆ ಶ್ರೀರಾಮ ಕಲ್ಯಾಣೋತ್ಸವ ನಡೆಯಿತು, ಕಲ್ಯಾಣೋತ್ಸದಲ್ಲಿ ಭಾರೀ ಸಂಖ್ಯೆಯಲ್ಲಿ ದಂಪತಿಗಳು ಭಾಗವಹಿಸಿದ್ದರು. ನಂತರ ಗೋ ಆರತಿ ನಡೆಯಿತು.

ಕೊನೆಯ‌ ದಿನವಾದ ಭಾನುವಾರದಂದು ಶ್ರೀರಾಮ ಶೋಭಯಾತ್ರೆಯು ಸಾವಿರಾರು ಹಿಂದೂ ಕಾರ್ಯಕರ್ತರೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಿಂದ ಹೊರಟು, ತಾಲೂಕು ಕಚೇರಿ, ಸೌಂದರ್ಯ ಮಹಲ್ ಸರ್ಕಲ್ ಸೇರಿ ಒಟ್ಟು 10 ಕಿ.ಮೀ ಗೂ ಹೆಚ್ಚು ವ್ಯಾಪ್ತಿಯಲ್ಲಿ ಯಾತ್ರೆ ಸಾಗಿತು. ಈ ವೇಳೆ ಡಿಜೆ ಸೌಂಡ್ ಗೆ ಯುವಕ ಯುವತಿಯರು ಹುಚ್ಚೆದ್ದು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಮೆರವಣಿಗೆಯಲ್ಲಿ ಭಾರತ ಮಾತೆ, ಕನ್ನಡಾಂಭೆ ಭುವನೇಶ್ವರಿ ದೇವಿ, ಶ್ರೀರಾಮ, ಹನುಮ, ಶಿವ ಪ್ರತಿಮೆಗಳೊಂದಿಗೆ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ಭುವನೇಶ್ವರಿದೇವಿಯ ಮೆರವಣಿಗೆ ವಿವಿಧ ಕಲಾತಂಡಗಳೊಡನೆ ನಡೆಯಿತು.

ನಂತರ ಕಾರ್ಕಳದ ಶೀಕಾಂತ್ ಶೆಟ್ಟಿ ಅವರಿಂದ ದಿಕ್ಸೂಚಿ ಭಾಷಣ ನಡೆಯಿತು. ಸಂಜೆ ರಾಮಾಯಣ ಕಥೆಯ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿಮದ್ದುಗಳ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆದವು.

ಕಳೆದ ಒಂಬತ್ತು ವರ್ಷಗಳಿಂದ ಶ್ರೀರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಚುನಾವಣೆಗಳ ಹಿನ್ನೆಲೆಯಲ್ಲಿ ತಡವಾಗಿದೆ. ಈ ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಯಾವುದೇ ವ್ಯಕ್ತಿಯನ್ನು ವೈಭವೀಕರಿಸದೇ ವಿಜೃಂಭಣೆಯಿಂದ ಹಾಗೂ ಹೆಚ್ಚು ಸಂಭ್ರಮದಿಂದ ಆಯೋಜಿಸಲಾಗಿದೆ ಎಂದು ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ತಿಳಿಸಿದರು.

ಒಟ್ಟಾರೆ ಭಜರಂಗದಳ ಕಾರ್ಯಕರ್ತರು ಹೆಚ್ಚಿರುವ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭರ್ಜರಿ ಶೋಭಯಾತ್ರೆ ನಡೆಯಿತು. ಹಿಂದೂ ಸಮಾಜ‌ ಒಗ್ಗೂಡಲು ಈ ಕಾರ್ಯಕ್ರಮ ಅನುಕೂಲ ಆಗುತ್ತದೆ ಎಂಬುದು ಕಾರ್ಯಕ್ರಮ ಆಯೋಜಕರ ಅಭಿಪ್ರಯಾವಾಗಿತ್ತು.

ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

4 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

6 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

7 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

8 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

9 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

14 hours ago