ನಗರದಲ್ಲಿ ಇತ್ತೀಚೆಗೆ ಪದೇ ಪದೇ ಅಪಘಾತಗಳು ನಡೆಯುತ್ತಿವೆ. ಇದರಿಂದ ಆನೇಕ ಸಾವು ನೋವು ಸಂಭವಿಸಿವೆ. ಇದಕ್ಕೆಲ್ಲಾ ಕಾರಣ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡದೇ ಇರುವುದು, ವೇಗವಾಗಿ, ಅಡ್ಡಾದಿಡ್ಡಿಯಾಗಿ, ಅಜಾಗರೂಕವಾಗಿ, ಬೈಕ್ ಸವಾರರು ಹೆಲ್ಮೆಟ್ ಹಾಕದೇ, ಕಾರು ಚಾಲಕರು ಸೀಟ್ ಬೆಲ್ಟ್ ಹಾಕದೇ ವಾಹನ ಚಾಲನೆ ಮಾಡುವುದರಿಂದ. ಅದೇರೀತಿ ಸಂಬಂಧಿಸಿದ ಇಲಾಖೆಗಳಿಂದ ನಡೆಸಲಾಗುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ರಸ್ತೆ ಇಕ್ಕೆಲಗಳಲ್ಲಿ ತಲೆಎತ್ತಿರುವ ಅಂಗಡಿಗಳು ಸೇರಿದಂತೆ ಇರತೆ ಕಾರಣಗಳಿದಿಂದಾಗಿ ಅಪಘಾತಗಳು ಸಂಭವಿಸುತ್ತವೆ.
ಗುರುವಾರ ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಬಂದಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ತಂದೆ ಸಾವನಪ್ಪಿದ್ದು, ಮಗು ಜೀವನ್ಮರಣ ನಡುವೆ ಹೋರಾಟ ನಡೆಸುವ ಶೋಚನೀಯ ಸ್ಥಿತಿ ಎದುರಾಗಿರುವ ಹಿನ್ನೆಲೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ನಗರ ಠಾಣೆಗೆ ಭೇಟಿ ನೀಡಿ ಅಪಘಾತಗಳನ್ನು ನಿಯಂತ್ರಣ ಮಾಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರೀತಂ ಶ್ರೇಯಕರ ಅವರಿಗೆ ಮನವಿ ಮಾಡಲಾಗಿದೆ.
ನಗರದಲ್ಲಿ ಪ್ರತಿನಿತ್ಯ ಡಿಕ್ರಾಸ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಟಿ.ಬಿ.ಸರ್ಕಲ್), ಎಪಿಎಂಸಿ ಮಾರುಕಟ್ಟೆ ಮುಂಭಾಗ, ಖಾಸ್ ಬಾಗ್, ರೈಲ್ವೇ ಸ್ಟೇಷನ್, ಡೈರಿ ಸರ್ಕಲ್, ತಾಲೂಕು ಕಚೇರಿ ವೃತ್ತ, ಕೊಂಗಾಡಿಯಪ್ಪ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ, ಇಂತಹ ಸ್ಥಳಗಳಲ್ಲಿ ಸಂಚಾರಿ ನಿಯಮ ಅಳವಡಿಕೆ, ಸಿಬ್ಬಂದಿ ನಿಯೋಜನೆ ಮಾಡುವಂತೆ ಮನವಿ ಮಾಡಲಾಗಿದೆ. ಅದೇರೀತಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಅವರನ್ನು ಹತೋಟಿಗೆ ತರುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದರು.
ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ.ಜಗನಾಥ್, ಅಪ್ಪಿ ವೆಂಕಟೇಶ್, ಬೈರೇಗೌಡ, ನಗರಸಭೆ ಸದಸ್ಯರಾದ ಆನಂದ್, ನಾಗರಾಜ್, ಶಿವು, ನಗರಸಭೆ ಸದಸ್ಯ ಶಿವಶಂಕರ್, ಮುಖಂಡರಾದ ಆದಿತ್ಯ ನಾಗೇಶ್, ಶ್ರೀನಗರ ಬಶೀರ್, ಮುನಿರಾಜು, ಆಂಜನಮೂರ್ತಿ, ಜಗದೀಶ್ ರೆಡ್ಡಿ, ಮುಖಂಡರಾದ ಮುತ್ತಣ್ಣ, ಜವಾಜಿ ರಾಜೇಶ್, ಮಾರಪ್ಪ, ಅಶೋಕ್, ಅಂಬರೀಶ್, ರಾಮಚಂದ್ರ ರೆಡ್ಡಿ ಸೇರಿದಂತೆ ಮತ್ತಿತರರಿದ್ದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…