ನಗರದಲ್ಲಿ ಅಪಘಾತ, ವಾಹನ ದಟ್ಟಣೆ ನಿಯಂತ್ರಣಕ್ಕೆ ಕಾಂಗ್ರೆಸ್ ಮುಖಂಡರ ಮನವಿ

ನಗರದಲ್ಲಿ ಇತ್ತೀಚೆಗೆ ಪದೇ ಪದೇ ಅಪಘಾತಗಳು ನಡೆಯುತ್ತಿವೆ.‌ ಇದರಿಂದ ಆನೇಕ ಸಾವು ನೋವು ಸಂಭವಿಸಿವೆ. ಇದಕ್ಕೆಲ್ಲಾ ಕಾರಣ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡದೇ ಇರುವುದು, ವೇಗವಾಗಿ, ಅಡ್ಡಾದಿಡ್ಡಿಯಾಗಿ, ಅಜಾಗರೂಕವಾಗಿ, ಬೈಕ್ ಸವಾರರು ಹೆಲ್ಮೆಟ್ ಹಾಕದೇ, ಕಾರು ಚಾಲಕರು ಸೀಟ್ ಬೆಲ್ಟ್ ಹಾಕದೇ ವಾಹನ ಚಾಲನೆ ಮಾಡುವುದರಿಂದ. ಅದೇರೀತಿ ಸಂಬಂಧಿಸಿದ ಇಲಾಖೆಗಳಿಂದ ನಡೆಸಲಾಗುವ ಅವೈಜ್ಞಾನಿಕ ರಸ್ತೆ ಅಭಿವೃದ್ಧಿ ಕಾಮಗಾರಿ, ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ರಸ್ತೆ ಇಕ್ಕೆಲಗಳಲ್ಲಿ ತಲೆಎತ್ತಿರುವ ಅಂಗಡಿಗಳು ಸೇರಿದಂತೆ ಇರತೆ ಕಾರಣಗಳಿದಿಂದಾಗಿ ಅಪಘಾತಗಳು ಸಂಭವಿಸುತ್ತವೆ.

ಗುರುವಾರ ಬೆಳಗ್ಗೆ ಮಗಳನ್ನು ಶಾಲೆಗೆ ಬಿಡಲು ಬೈಕ್ ನಲ್ಲಿ ಬಂದಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ತಂದೆ ಸಾವನಪ್ಪಿದ್ದು, ಮಗು ಜೀವನ್ಮರಣ ನಡುವೆ ಹೋರಾಟ ನಡೆಸುವ ಶೋಚನೀಯ ಸ್ಥಿತಿ ಎದುರಾಗಿರುವ ಹಿನ್ನೆಲೆ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಸದಸ್ಯರು ನಗರ ಠಾಣೆಗೆ ಭೇಟಿ ನೀಡಿ ಅಪಘಾತಗಳನ್ನು ನಿಯಂತ್ರಣ ಮಾಡುವ ಮುನ್ನೆಚ್ಚರಿಕೆ ಕ್ರಮಗಳನ್ನು ಶೀಘ್ರವಾಗಿ ಕೈಗೊಳ್ಳುವಂತೆ ನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಪ್ರೀತಂ ಶ್ರೇಯಕರ ಅವರಿಗೆ ಮನವಿ ಮಾಡಲಾಗಿದೆ.

ನಗರದಲ್ಲಿ ಪ್ರತಿನಿತ್ಯ ಡಿಕ್ರಾಸ್, ಡಾ.ಬಿ.ಆರ್.ಅಂಬೇಡ್ಕರ್ ವೃತ್ತ (ಟಿ.ಬಿ.ಸರ್ಕಲ್), ಎಪಿಎಂಸಿ ಮಾರುಕಟ್ಟೆ ಮುಂಭಾಗ, ಖಾಸ್ ಬಾಗ್, ರೈಲ್ವೇ ಸ್ಟೇಷನ್, ಡೈರಿ ಸರ್ಕಲ್, ತಾಲೂಕು ಕಚೇರಿ ವೃತ್ತ, ಕೊಂಗಾಡಿಯಪ್ಪ ರಸ್ತೆ‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದೆ, ಇಂತಹ ಸ್ಥಳಗಳಲ್ಲಿ ಸಂಚಾರಿ ನಿಯಮ ಅಳವಡಿಕೆ, ಸಿಬ್ಬಂದಿ ನಿಯೋಜನೆ‌ ಮಾಡುವಂತೆ ಮನವಿ ಮಾಡಲಾಗಿದೆ. ಅದೇರೀತಿ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಅವರನ್ನು ಹತೋಟಿಗೆ ತರುವಂತೆ ಪೊಲೀಸ್ ಇಲಾಖೆಗೆ‌ ಸೂಚಿಸಿದರು.

ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಪಿ.ಜಗನಾಥ್, ಅಪ್ಪಿ ವೆಂಕಟೇಶ್, ಬೈರೇಗೌಡ, ನಗರಸಭೆ ಸದಸ್ಯರಾದ ಆನಂದ್, ನಾಗರಾಜ್, ಶಿವು, ನಗರಸಭೆ ಸದಸ್ಯ ಶಿವಶಂಕರ್, ಮುಖಂಡರಾದ ಆದಿತ್ಯ ನಾಗೇಶ್, ಶ್ರೀನಗರ ಬಶೀರ್, ಮುನಿರಾಜು, ಆಂಜನಮೂರ್ತಿ, ಜಗದೀಶ್ ರೆಡ್ಡಿ, ಮುಖಂಡರಾದ ಮುತ್ತಣ್ಣ, ಜವಾಜಿ ರಾಜೇಶ್, ಮಾರಪ್ಪ, ಅಶೋಕ್, ಅಂಬರೀಶ್, ರಾಮಚಂದ್ರ ರೆಡ್ಡಿ ಸೇರಿದಂತೆ ಮತ್ತಿತರರಿದ್ದರು.

Ramesh Babu

Journalist

Recent Posts

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

13 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

19 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

23 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

1 day ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago