ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಉಪವಿಭಾಗದ ವತಿಯಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ ಡಿವೈಎಸ್ ಪಿ ರವಿ.ಪಿ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಗರದ ಬಸವ ಭವನದಲ್ಲಿ ಆಯೋಜನೆ ಮಾಡಲಾಗಿತ್ತು.
ಸಭೆಯಲ್ಲಿ ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಬೇಕು, ಖಾಸಗಿ, ಸರ್ಕಾರಿ ಜಾಗದಲ್ಲಿ ಪ್ರತಿಷ್ಠಾಪನೆ ಮಾಡಲು ಸಂಬಂಧಿಸಿದ ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು ಎಂದು ಡಿವೈಎಸ್ಪಿ ರವಿ ಪಿ ಅವರು ತಿಳಿಸಿದರು.