ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಹಬ್ಬ ಆಚರಿಸಿ- ಡಿವೈಎಸ್ಪಿ ರವಿ. ಪಿ

ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಬೇಕು, ಖಾಸಗಿ, ಸರ್ಕಾರಿ ಜಾಗದಲ್ಲಿ ಪ್ರತಿಷ್ಠಾಪನೆ ಮಾಡಲು ಸಂಬಂಧಿಸಿದ ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು ಎಂದು ಡಿವೈಎಸ್ಪಿ ರವಿ ಪಿ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಉಪ‌ವಿಭಾಗದ ವತಿಯಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ ಡಿವೈಎಸ್ ಪಿ ರವಿ.ಪಿ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಗರದ ಬಸವ ಭವನದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದರು.

ಧ್ವನಿ ವರ್ಧಕ ಅನುಮತಿ ಪತ್ರ, ಬೆಸ್ಕಾಂ ಇಲಾಖೆಯಿಂದ ಅನುಮತಿ ಪತ್ರ, ರಸ್ತೆ ಸಂಚಾರಕ್ಕೆ ಅಡಚಣೆಯಾಗದಂತೆ ಶೆಡ್, ಪೂಜಾ ಸ್ಥಳ ನಿರ್ಮಿಸಬೇಕು, ಡಿ.ಜೆ ಸೌಂಡ್ ಬಳಸಿ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ ಎಂದು ತಿಳಿಸಿದರು.

ಗಣೇಶ ಮೂರ್ತಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ  4ಅಡಿ ಎತ್ತರ ಮೀರದಂತೆ ಹಾಗೂ ಮನೆಗಳಲ್ಲಿ 2ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸಬೇಕು, ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಭಂಗವನ್ನುಂಟು ಮಾಡದಂತೆ ಹಬ್ಬವನ್ನು ಶಾಂತ ರೀತಿಯಲ್ಲಿ ಆಚರಿಸಬೇಕು ಎಂದು ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ತಿಳಿಸಿದರು.

Ramesh Babu

Journalist

Recent Posts

ಲಾರಿ-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

ಲಾರಿ-ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು…

9 minutes ago

ಹಸಿವಿನ ಔಷಧಿ ಮತ್ತು ಮತದಾನ…..

ಇತ್ತೀಚೆಗೆ Social Media ಗಳಲ್ಲಿ ಅತ್ಯಂತ ಗಮನಸೆಳೆದ ಮನಮಿಡಿಯುವ ಚಿತ್ರ...... ಒಬ್ಬ ಬಾಲಕ ಡಾಕ್ಟರ್ ಬಳಿ " ಹಸಿವು ಹೋಗಲಾಡಿಸಲು…

3 hours ago

ಶಾಲಾ ಆವರಣ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ: 9 ಕೆಜಿ ತಂಬಾಕು ಉತ್ಪನ್ನ, ನಿರ್ಬಂಧಿತ ಏಕಬಳಕೆ ಪ್ಲಾಸ್ಟಿಕ್ ಪತ್ತೆ: ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, ದಂಡ ವಿಧಿಸಿದ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಶಾಲಾ ಆವರಣದ ಸುತ್ತಮುತ್ತ ಕಾನೂನು ಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಏ.4ರಂದು ದೊಡ್ಡಬಳ್ಳಾಪುರ…

14 hours ago

ವಕೀಲ ಪ್ರತಾಪ್ ಜಮೀನು ವ್ಯಾಜ್ಯಕ್ಕೆ ಬಿಗ್ ಟ್ವಿಸ್ಟ್: ‘ಕಾಂಪೌಂಡ್ ನಿರ್ಮಾಣಕ್ಕೆ ಅಡ್ಡಿಪಡಿಸಲು ಹೇಳಿದ್ದೇ ಶಾಸಕ ಧೀರಜ್ ಮುನಿರಾಜ್’- ವಕೀಲ ಪ್ರತಾಪ್ ಗಂಭೀರ ಆರೋಪ

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

15 hours ago

ಸೋಲು – ಸಾವು – ಭಯ – ಬದುಕು……

"ಆದರ್ಶವೊಂದನ್ನು ಬೆನ್ನು ಹತ್ತುವುದು ಮನುಷ್ಯನಿಗೆ ಕ್ರಿಯಾಶೀಲತೆಯನ್ನು ಮತ್ತು ಸೊಗಸಾದ ನೈತಿಕ ಧೈರ್ಯವನ್ನು ನೀಡುತ್ತದೆ " - ಡಾಕ್ಟರ್ ಬಾಬಾ ಸಾಹೇಬ್…

1 day ago

Understanding Cheap Emotional Support Animal Letters(6)

Cheap Emotional Support Animal Letter: Your Guide Understanding Cheap Emotional Support Animal Letters In recent…

1 day ago