ಸರ್ವಧರ್ಮ ಸಮನ್ವಯ ಸಾರುವ ನಿಟ್ಟಿನಲ್ಲಿ ಗೌರಿ ಗಣೇಶ ಹಬ್ಬವನ್ನು ಆಚರಿಸಬೇಕು, ಖಾಸಗಿ, ಸರ್ಕಾರಿ ಜಾಗದಲ್ಲಿ ಪ್ರತಿಷ್ಠಾಪನೆ ಮಾಡಲು ಸಂಬಂಧಿಸಿದ ಗ್ರಾಮ ಪಂಚಾಯಿತಿ ವತಿಯಿಂದ ಹಾಗೂ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯಬೇಕು ಎಂದು ಡಿವೈಎಸ್ಪಿ ರವಿ ಪಿ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಉಪವಿಭಾಗದ ವತಿಯಿಂದ ಗೌರಿ ಗಣೇಶ ಹಬ್ಬದ ಪ್ರಯುಕ್ತ ಡಿವೈಎಸ್ ಪಿ ರವಿ.ಪಿ ಅವರ ನೇತೃತ್ವದಲ್ಲಿ ಶಾಂತಿ ಸಭೆಯನ್ನು ನಗರದ ಬಸವ ಭವನದಲ್ಲಿ ಆಯೋಜನೆ ಮಾಡಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದರು.
ಗಣೇಶ ಮೂರ್ತಿಯನ್ನು ಸಾರ್ವಜನಿಕ ಸ್ಥಳಗಳಲ್ಲಿ 4ಅಡಿ ಎತ್ತರ ಮೀರದಂತೆ ಹಾಗೂ ಮನೆಗಳಲ್ಲಿ 2ಅಡಿ ಎತ್ತರ ಮೀರದಂತೆ ಪ್ರತಿಷ್ಠಾಪಿಸಬೇಕು, ಮೆರವಣಿಗೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಕಾನೂನು ಸುವ್ಯವಸ್ಥೆಗೆ ಯಾವುದೇ ರೀತಿಯಲ್ಲಿ ಭಂಗವನ್ನುಂಟು ಮಾಡದಂತೆ ಹಬ್ಬವನ್ನು ಶಾಂತ ರೀತಿಯಲ್ಲಿ ಆಚರಿಸಬೇಕು ಎಂದು ತಹಶೀಲ್ದಾರ್ ವಿಭಾ ವಿದ್ಯಾ ರಾಠೋಡ್ ತಿಳಿಸಿದರು.
ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…