ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಚುನಾವಣಾ ಚಾಣಕ್ಯ ಎಂದೇ ಕರೆಸಿಕೊಳ್ಳುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದಲ್ಲಿಂದು ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.
2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೆರಡು ದಿನ ಬಾಕಿ ಉಳಿದಿದ್ದು ಚುನಾವಣೆಗೂ ಮುನ್ನ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ಕೈಗೊಂಡಿರುವ ಅಮಿತ್ ಶಾ ರವರು ಇಂದು ದೊಡ್ಡಬಳ್ಳಾಪುರ ವಿಧಾನಸಭಾ
ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು.
ಈ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಂತಿದ್ದ ಜನಸ್ತೋಮಕ್ಕೆ ಕೈಬೀಸಿ ಹಾರೈಸಿದರು. ಮುಗುವಾಳಪ್ಪ ಸರ್ಕಲ್ ನಿಂದ ಆರಂಭವಾದ ರೋಡ್ ಶೋ ತಾಲ್ಲೂಕು ಕಚೇರಿ ಮುಖಾಂತರ ಹಾದು ಅಂಬೇಡ್ಕರ್ ರಸ್ತೆ ಮೂಲಕ ರಾಮೇಗೌಡ ವೃತ್ತದಲ್ಲಿ ಮುಕ್ತಾಯಗೊಂಡಿತು.
ರಸ್ತೆಯುದ್ದಕ್ಕೂ ನಿಂತಿದ್ದ ಜನ ಮೋದಿ, ಅಮಿತ್ ಶಾ, ಧೀರಜ್ ಮುನಿರಾಜ್ ಎಂದು ಜೈಕಾರ ಕೂಗಿ ಸಂಭ್ರಮಿಸಿದರು.
ಯುವಕನಿಗೆ ಪಕ್ಷ ಅವಕಾಶ ಮಾಡಿಕೊಟ್ಟಿದೆ, ಮತದಾರರಾದ ನೀವು ಸಹ ಮತ ನೀಡಿ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿ ಕ್ಷೇತ್ರಾಭಿವೃದ್ಧಿಗೆ ಅವಕಾಶ ಮಾಡಿಕೊಡಿ ಎಂದು ಮತದಾರರಲ್ಲಿ ಮನವಿ ಮಾಡಿದ ಅಮಿತ್ ಶಾ.